ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ

Twitter
Facebook
LinkedIn
WhatsApp
ಕೇದಾರನಾಥ ಬಳಿ ಹೆಲಿಕಾಪ್ಟರ್​ ಪತನ; 7 ಮಂದಿ ದುರ್ಮರಣ

ಕೇದಾರನಾಥ: ಕೇದಾರನಾಥ (Kedarnath) ಬಳಿ ಹೆಲಿಕಾಪ್ಟರ್​  (Helicopter)ಪತನಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್​​ನಲ್ಲಿದ್ದ 8 ಜನರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಕೇದಾರನಾಥದ 2 ಕಿ.ಮೀ. ದೂರದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿಯವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದುರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೇದಾರನಾಥ ಧಾಮ ದೇಗುಲದಿಂದ ಸುಮಾರು 2 ಕಿಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಉತ್ತರಾಖಂಡ  ಮುಖ್ಯಮಂತ್ರಿ ಪುಷ್ಕರ್ ಧಾಮಿ ತನಿಖೆಗೆ ಆದೇಶಿಸಿದ್ದಾರೆ. ಕೇದಾರನಾಥ ಬಳಿಯ ಗರುಡ ಚಟ್ಟಿ ಎಂಬಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವು ಜನರು ಸಾವಿಗೀಡಾಗಿರುವ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ಎಸ್  ಡಿಆರ್ ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ಧಾವಿಸಿವೆ. ಈ ದುರಂತ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಯಾತ್ರಿಕರನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದರು.

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಉತ್ತರಾಖಂಡದ ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಸಾವುಗಳನ್ನು ಖಚಿತಪಡಿಸಿದ್ದಾರೆ. ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದು ಪತನವಾಗಿದ್ದು ಪ್ರತಿಕೂಲ ಹವಾಮಾನವೇ ದುರಂತಕ್ಕೆ ಕಾರಣ ಎಂದು ನಂಬಲಾಗಿದೆ.

ಅಯಾನ್ ಏವಿಯೇಷನ್ ಪ್ರೈ.ಲಿ. ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು  ಇದು ಈ ಪ್ರದೇಶದಲ್ಲಿ ಹೆಲಿ ಸೇವೆಗಳನ್ನು ಒದಗಿಸುತ್ತದೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ದೆಹಲಿ ಮೂಲದ ಆರ್ಯನ್ ಏವಿಯೇಷನ್‌ಗೆ ಸೇರಿದ VT-RPN ಎಂದು ನೋಂದಾಯಿಸಲಾದ ಬೆಲ್ 407 ಹೆಲಿಕಾಪ್ಟರ್ ಕೇದಾರನಾಥದಿಂದ ಗುಪ್ತಕಾಶಿಗೆ ಹೋಗುವ ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನವಾದ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ