ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇದಾರನಾಥ ಯಾತ್ರೆ ಇಂದಿನಿಂದ ಆರಂಭ – ಯಾತ್ರಾರ್ಥಿಗಳಿಗೆ ಬಾಗಿಲು ತೆರೆದ ದೇವಾಲಯ

Twitter
Facebook
LinkedIn
WhatsApp
court 5 4

ಡೆಹ್ರಾಡೂನ್: ಕೇದಾರನಾಥ (Kedarnath Dham) ಯಾತ್ರೆ ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಕೇದಾರನಾಥ ಧಾಮದ ಬಾಗಿಲು ಯಾತ್ರಾರ್ಥಿಗಳಿಗೆ ತೆರೆದಿದೆ.

ಶ್ಲೋಕಗಳ ಪಠ, ವಾದ್ಯಗಳ ಗಾಯನದೊಂದಿಗೆ ಇಂದು ಕೇದಾರನಾಥ ಧಾಮದ ಬಾಗಿಲು ತೆರೆಯಿತು. ಯಾತ್ರಾರ್ಥಿಗಳು ಸಂಭ್ರಮದಿಂದ ದೇವಾಲಯ ಪ್ರವೇಶಿಸುತ್ತಿದ್ದಾರೆ. ದಿನವೊಂದಕ್ಕೆ 13 ಸಾವಿರ ಯಾತ್ರಾರ್ಥಿಗಳಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗುವುದು.

ಆದಾಗ್ಯೂ, ಯಾತ್ರಾ ಮಾರ್ಗದಲ್ಲಿ ಭಾರೀ ಹಿಮಪಾತ ಮತ್ತು ಹವಾಮಾನ ಇಲಾಖೆಯಿಂದ ಬಂದಿರುವ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ಸರ್ಕಾರ ಕೇದಾರನಾಥ ಧಾಮ ಯಾತ್ರೆಗೆ ಯಾತ್ರಿಕರಿಂದ ನೋಂದಣಿ ಅರ್ಜಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇದಾರನಾಥ ಧಾಮ್ ಮಾರ್ಗದಲ್ಲಿ ಭಾರೀ ಹಿಮಪಾತದ ಬಗ್ಗೆ ಎಚ್ಚರಿಕೆ ನೀಡಿದೆ.

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಯಮುನೋತ್ರಿ ಧಾಮದಿಂದ ಯಾತ್ರೆ ಆರಂಭವಾಯಿತು. ಈ ಬಾರಿ ಯಾತ್ರಾರ್ಥಿಗಳಿಗೆ ಸರ್ಕಾರ ಟೋಕನ್‌ ವ್ಯವಸ್ಥೆಯನ್ನು ಕಲ್ಪಿಸಿದೆ. ಸುಗಮ ಯಾತ್ರೆಗಾಗಿ ಈ ನಿರ್ಧಾರ ಕೈಗೊಂಡಿದೆ. ಯಾತ್ರಾ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಡಳಿತ ಹಲವು ಕ್ರಮಕೈಗೊಂಡಿದೆ. 12 ವೈದ್ಯಕೀಯ ಶಿಬಿರಗಳನ್ನು ತೆರೆದಿದ್ದು, ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ನಿಯೋಜಿಸಿದೆ. ಅಂಬುಲೆನ್ಸ್‌ ಸೇವೆ ಕೂಡ ಕಲ್ಪಿಸಲಾಗಿದೆ. ತುರ್ತು ಸೇವೆಗಾಗಿ ಏರ್‌ ಅಂಬುಲೆನ್ಸ್‌ ಸೇವೆಗೆ ಉತ್ತರಾಖಂಡ (Uttarakhand) ಸರ್ಕಾರ ಅನುಮತಿ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ