ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದಲ್ಲಿ ಇಂದು ಮುಂಗಾರು ಪ್ರವೇಶ; ಮುಂದಿನ ವಾರ ಕರ್ನಾಟಕಕ್ಕೂ ಎಂಟ್ರಿ ಕೊಡಲಿದೆ ಮಾನ್ಸೂನ್.!

Twitter
Facebook
LinkedIn
WhatsApp
WhatsApp ಕೇರಳದಲ್ಲಿ ಇಂದು ಮುಂಗಾರು ಪ್ರವೇಶ; ಮುಂದಿನ ವಾರ ಕರ್ನಾಟಕಕ್ಕೂ ಎಂಟ್ರಿ ಕೊಡಲಿದೆ ಮಾನ್ಸೂನ್.! 2024 05 30 at 12.35.02

ರೆಮಲ್ ಚಂಡಮಾರುತ(Remal Cyclone) ಪರಿಣಾಮ ನೈಋತ್ಯ ಮುಂಗಾರು ಸ್ವಲ್ಪ ವೇಗವಾಗಿ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ನೈಋತ್ಯ ಮುಂಗಾರು ಇಂದು ಕೇರಳ ಪ್ರವೇಶಿಸಲಿದ್ದು, ಅರುಣಾಚಲಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್​, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನದಲ್ಲಿ ಸಾಮಾನ್ಯವಾಗಿ ಜೂನ್​ 5ರಂದು ಮುಂಗಾರು ಪ್ರವೇಶಿಸುತ್ತಿತ್ತು. ಆದರೆ ಈ ಬಾರಿ ಬಹುಬೇಗವೇ ಮಳೆ ಶುರುವಾಗಲಿದೆ.

ಏಕಕಾಲಕ್ಕೆ ಕೇರಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು ಪ್ರವೇಶಿಸಲಿದೆ. 2017ರಲ್ಲಿ ಈ ವಿದ್ಯಾಮಾನ ನಡೆದಿತ್ತು ಮೋರಾ ಚಂಡಮಾರುತದ ಕಾರಣದಿಂದ ಪೂರ್ವ ಕೇಂದ್ರ ಬಂಗಾಳಕೊಲ್ಲಿಯಲ್ಲಿ ಮುಂಗಾರು ಮಾರುತ ರೂಪುಗೊಂಡಿತ್ತು. ಈ ಬಾರಿ ರೆಮಲ್ ಚಂಡಮಾರುತದಿಂದಾಗಿ ಏಕಕಾಲಕ್ಕೆ ಕೇರಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ.

ಕಳೆದ ಒಂದು ವಾರದಿಂದ, ದೇಶದ ಪ್ರಮುಖ ಭಾಗಗಳು ತೀವ್ರ ಶಾಖದ ಅಲೆಯಿಂದ ತತ್ತರಿಸುತ್ತಿವೆ. ಉತ್ತರ ಮತ್ತು ಮಧ್ಯ ಭಾರತದ ದೊಡ್ಡ ಭಾಗಗಳು ಮೇ 29 ರಂದು ರಾಜಸ್ಥಾನದ ಚುರು ಮತ್ತು ಹರಿಯಾಣದ ಸಿರ್ಸಾದಲ್ಲಿ 50 ಡಿಗ್ರಿ ಸೆಲ್ಸಿಯಸ್ ಅನ್ನು ದಾಟಿತ್ತು ಮತ್ತು ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶವಿತ್ತು.

 

ಕೃಷಿ ಪ್ರದೇಶದ 52 ಪ್ರತಿಶತವು ಮುಂಗಾರಿನ ಮೇಲೆ ಅವಲಂಬಿತವಾಗಿದೆ,ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಹೊರತಾಗಿ ಕುಡಿಯುವ ನೀರಿಗೆ ನಿರ್ಣಾಯಕವಾದ ಜಲಾಶಯಗಳನ್ನು ಮರುಪೂರಣಗೊಳಿಸಲು ಇದು ನಿರ್ಣಾಯಕವಾಗಿದೆ. ಜೂನ್ ಮತ್ತು ಜುಲೈ ಅನ್ನು ಕೃಷಿಗೆ ಪ್ರಮುಖ ಮಾನ್ಸೂನ್ ತಿಂಗಳುಗಳೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಖಾರಿಫ್ ಬೆಳೆಗೆ ಹೆಚ್ಚಿನ ಬಿತ್ತನೆಯು ಈ ಅವಧಿಯಲ್ಲಿ ನಡೆಯುತ್ತದೆ.

ಪಶ್ಚಿಮ ಬಂಗಾಳ ಹಾಗೂಬಾಂಗ್ಲಾದೇಶದ ಮೂಲಕ ಸಾಗಿದ ರೆಮಲ್ ಚಂಡಮಾರುತ ಮುಂಗಾರು ಹರಿವನ್ನು ಬಂಗಾಳಕೊಲ್ಲಿಗೆ ಎಳೆದಿದೆ, ಇದರ ಪರಿಣಾಮ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು 5 ದಿನ ಮುಂಚಿತವಾಗಿಯೇ ಪ್ರವೇಶ ಪಡೆಯಲಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ಹಾಗೂ ಈಶಾನ್ಯ ರಾಜ್ಯಗಳ ಕೆಲ ಪ್ರದೇಶಗಳಿಗೆ ಮುಂಗಾರು ಪ್ರವೇಶಿಸಲು ಮತ್ತು ಮುನ್ನಡೆಯಲು ಅನುಕೂಲಕರ ವಾತಾವರಣ ಇದೆ. ಕಳೆದ ವರ್ಷ ಒಂದು ವಾರ ವಿಳಂಬವಾಗಿ ಮುಂಗಾರು ಕೇರಳ ಪ್ರವೇಶಿಸಿತ್ತು.

ಕರ್ನಾಟಕದಲ್ಲಿದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು  ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವುದರಿಂದ ಸಹಜವಾಗಿಯೇ ರೈತರಲ್ಲಿ ಸಂತಸ ಮನೆ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist