ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇವಲ IPL ಮಾತ್ರವಲ್ಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಿಂದಲೂ ಕೆ. ಎಲ್ ರಾಹುಲ್ ಔಟ್!

Twitter
Facebook
LinkedIn
WhatsApp
359171.6

ಬೆಂಗಳೂರು: ಕಾಲಿನ ಗಾಯಕ್ಕೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್ ನಿಂದ ಮಾತ್ರವಲ್ಲ..  ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ (WTC) ಫೈನಲ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ.ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ ಬಳಿಕ ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆಯ ಕಾರಣದಿಂದ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವಂತೆ ಸಲಹೆ ನೀಡಲಾಗಿತ್ತು. ಅದರಂತೆ ಅವರು ಐಪಿಎಲ್ 2023 ಟೂರ್ನಿಯಿಂದ ಹೊರಬಿದ್ದಿದ್ದರು.

ಇದೀಗ ಕೆಎಲ್ ರಾಹುಲ್ ಅವರು ಮುಂಬರುವ ಜೂನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲೂ ಆಡುವ ಸಾಧ್ಯತೆಯಿಲ್ಲ. ತಂಡದಲ್ಲಿ ಸ್ಥಾನ ಪಡೆದಿರುವ ಅವರು ಅದರಿಂದಲೂ ಹೊರ ಬಿದಿದ್ದಾರೆ ಎನ್ನಲಾಗಿದೆ. ಈ ಕುರಿತು ಖ್ಯಾತ ಕ್ರಿಕೆಟ್ ಸುದ್ದಿ ವೆಬ್ ಸೈಟ್ ರಾಹುಲ್ ಈಗ ಮುಂಬೈನಲ್ಲಿದ್ದು, ಸ್ಕ್ಯಾನಿಂಗ್ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪರೀಕ್ಷೆಗಳ ಬಳಿಕ ಅವರ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಭಾಗವಹಿಸುವಿಕೆಯ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಈ ಬಗ್ಗೆ ಸ್ವತಃ ರಾಹುಲ್ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ‘”ವೈದ್ಯಕೀಯ ತಂಡದ ಸಲಹೆಯನ್ನು ಪರಿಗಣಿಸಿ ಮತ್ತು ಸಮಾಲೋಚಿಸಿದ ನಂತರ, ನಾನು ಶೀಘ್ರದಲ್ಲೇ ನನ್ನ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ತೀರ್ಮಾನಿಸಲಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಚೇತರಿಕೆಯ ಮೇಲೆ ನನ್ನ ಗಮನವಿರುತ್ತದೆ. ಇದು ಕಠಿಣ ನಿರ್ಧಾರವಾಗಿದೆಯಾದರೂ, ನಾನು ಸಂಪೂರ್ಣ ಚೇತರಿಸಿಕೊಳ್ಳಲು ಇದು ಸರಿಯಾದ ಮಾರ್ಗ ಎಂದು ಪೋಸ್ಟ್ ಮಾಡಿದ್ದಾರೆ.

WhatsApp Image 2023 05 05 at 9.10.04 PM

ಇನ್ನು ರಾಹುಲ್ ಹೊರತಾಗಿ, ಎಡಗೈ ವೇಗಿ ಜಯದೇವ್ ಉನದ್ಕತ್ ಕೂಡ ಐಪಿಎಲ್ 2023 ರಿಂದ ಹೊರಗುಳಿದಿದ್ದಾರೆ. ಉನದ್ಕತ್ ಅವರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡುವ ಬಗ್ಗೆಯೂ ಅನುಮಾನವಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಲೀಗ್ ಹಂತವು ಮೇ 21 ರಂದು ಕೊನೆಗೊಳ್ಳಲಿದ್ದು, ನಂತರ ಮೇ 23 ರಂದು ಡಬ್ಲ್ಯುಟಿಸಿ ಫೈನಲ್‌ ಗಾಗಿ ಭಾರತೀಯ ತಂಡವು ಲಂಡನ್‌ಗೆ ಹೊರಡಲಿದೆ ಎಂದು ವರದಿ ಹೇಳಿದೆ. ಪ್ಲೇಆಫ್‌ ನಲ್ಲಿ ಆಡುವ ಐಪಿಎಲ್ ತಂಡಗಳ ಆಟಗಾರರು ನಂತರದ ದಿನಾಂಕದಲ್ಲಿ ಲಂಡನ್‌ ಗೆ ತೆರಳುತ್ತಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ