ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

Twitter
Facebook
LinkedIn
WhatsApp
download 7 1

ಬೆಳಗಾವಿ: ಕುಂದಾನಗರಿ ‌ಬೆಳಗಾವಿಗೆ (Belagavi) ಇಂದು ಪ್ರಧಾನಿ ನರೇಂದ್ರ ‌ಮೋದಿ (Narendra Modi) ಭೇಟಿ ಹಿನ್ನೆಲೆಯಲ್ಲಿ ನಗರವು ಕೇಸರಿಮಯವಾಗಿದ್ದು, ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ (BJP) ಬಾವುಟ ಹಾರಾಡುತ್ತಿವೆ.

ಶಿವಮೊಗ್ಗ ಭೇಟಿ ಬಳಿಕ ಮಧ್ಯಾಹ್ನ 2:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲಿನಿ ಸಿಟಿ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಮೋ ಚಾಲನೆ ನೀಡಲಿದ್ದಾರೆ. ಮಾಲಿನಿ ಸಿಟಿ ಮೈದಾನದಲ್ಲಿ 10 ಎಕರೆ ಜಾಗದಲ್ಲಿ ಬೃಹದಾಕಾರದ ಟೆಂಟ್ ನಿರ್ಮಾಣ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯನ್ನು ಬೆಳಗಾವಿ ಜಿಲ್ಲಾಡಳಿತ ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತು ಬಿಡುಗಡೆ ಮಾಡಲಿರುವ ಮೋದಿ 8 ಕೋಟಿಗೂ ಹೆಚ್ಚು ರೈತರ ಖಾತೆಗೆ ತಲಾ 2,000 ರೂ. ಜಮಾವಣೆ ಆಗಲಿದೆ.

ಇದೇ ವೇಳೆ‌ ನವೀಕೃತ ಬೆಳಗಾವಿ ರೇಲ್ವೆ ನಿಲ್ದಾಣ ಉದ್ಘಾಟನೆ, ಬೆಳಗಾವಿ, ಕಿತ್ತೂರು, ಧಾರವಾಡ ರೈಲು ಮಾರ್ಗಕ್ಕೆ ಶಂಕು ಸ್ಥಾಪನೆ, ಬೆಳಗಾವಿ ಲೋಂಡಾ ರೈಲು ಮಾರ್ಗ ಡಬ್ಲಿಂಗ್ ಕಾಮಗಾರಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. ಇದಲ್ಲದೇ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಆಗಮಿಸುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬೆಳಗಾವಿ ಜಿಲ್ಲೆಯ ಪ್ರತಿ ಗ್ರಾಪಂನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.

ಫಲಾನುಭವಿಗಳ ಕರೆತರಲು ಒಂದು ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಮಾಲಿನಿ ಸಿಟಿ ಮೈದಾನದ ಅರ್ಧ ಕಿಮೀ ಅಂತರದಲ್ಲಿ ಮೂರು ಸ್ಥಳ ಗುರುತಿಸಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ 3 ಸ್ಥಳಗಳಲ್ಲಿ 50 ಎಕರೆ ಜಾಗ ಮೀಸಲು ಇಡಲಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿಯೇ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಹೆಜ್ಜೆ ಹೆಜ್ಜೆಗೂ ಪೊಲೀಸ್ ಸರ್ಪಗಾವಲು: ಮೋದಿ ಆಗಮನ ಹಿನ್ನೆಲೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ನಗರದ ಎಪಿಎಂಸಿ ಬಳಿಯ ಪೊಲೀಸ್ ಮೈದಾನದಿಂದ ಮಾಲಿನಿ ಸಿಟಿ ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆಯೋಜನೆ ಹಿನ್ನಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ‌ಮುನ್ನೆಚ್ಚರಿಕೆ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು, ಮೋದಿ ಭದ್ರತೆಗೆ 5 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.‌

ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಮೋದಿ ಇಂದು 10 ಕಿಮೀ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸರ ನಿಗಾ ವಹಿಸಿದ್ದಾರೆ. ಬೆಳಗಾವಿ ಜಿಲ್ಲಾ ಎಸ್ಪಿ ಡಾ.‌ಸಂಜೀವ್ ಪಾಟೀಲ್‌ ಸೇರಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಭದ್ರತೆ ನೋಡಿಕೊಳ್ಳಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ