ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೈಕೊಟ್ಟ ಅದೃಷ್ಟ: ಬಿಗ್ ಬಾಸ್ ಮನೆಯಿಂದ ದಿವ್ಯಾ ಉರುಡುಗ ಔಟ್?

Twitter
Facebook
LinkedIn
WhatsApp
agozfrtkvi65lqye 1614584489

ಬಿಗ್ ಬಾಸ್ (Bigg Boss Kannada) ಸೀಸನ್ 8ರಲ್ಲಿ ಫೈನಲಿಸ್ಟ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ದಿವ್ಯಾ ಉರುಡುಗ (Divya Uruduga)  ಈ ಬಾರಿ ಸೀಸನ್ 9ಕ್ಕೂ ಕಾಲಿಟ್ಟಿದ್ದರು. ಆದರೆ ಇದೀಗ ಅವರ ಲಕ್‌ ಮತ್ತೆ ಕೈ ಕೊಟ್ಟಿದೆ. ಬಿಗ್‌ ಬಾಸ್‌ ಆಟದಿಂದ  ದಿವ್ಯಾ ಉರುಡುಗ ಎಲಿಮಿನೇಟ್‌ ಆಗಿದ್ದಾರೆ.

ಬಿಗ್ ಬಾಸ್ ಸೀಸನ್ 9 (Bigg Boss Kannada 9) ಈ ಬಾರಿ ಭಿನ್ನವಾಗಿತ್ತು. ಪ್ರವೀಣರು ಮತ್ತು ನವೀನರು ಎಂಬ ಯೋಜನೆಯ ಅಡಿ ಬಿಗ್ ಬಾಸ್ ಶೋ ಮೂಡಿ ಬಂದಿತ್ತು. ಪ್ರವೀಣರ ಪೈಕಿಯಲ್ಲಿ ಗುರುತಿಸಿಕೊಂಡಿದ್ದ ದಿವ್ಯಾ ಉರುಡುಗ ಈ ಬಾರಿ ಟಿವಿ ಬಿಗ್ ಬಾಸ್ ಸೀಸನ್ 9ಕ್ಕೂ ಕಾಲಿಟ್ಟಿದ್ದರು. ಐದು ಫೈನಲಿಸ್ಟ್‌ಗಳಲ್ಲಿ ಒಬ್ಬರಾಗಿ ದಿವ್ಯಾ ಗಟ್ಟಿ ಪೈಪೋಟಿ ನೀಡಿದ್ದರು. ಈಗ ದಿವ್ಯಾ ಉರುಡುಗ ಐದನೇ ಸ್ಥಾನದಲ್ಲಿ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.

ಕಳೆದ ಸೀಸನ್‌ನಲ್ಲಿ ಅರವಿಂದ್ ಕೆ.ಪಿ (Aravind Kp) ಜೊತೆ ದಿವ್ಯಾ ಹೈಲೈಟ್ ಆಗಿದ್ದರು. ಹಾಗೆಯೇ ಸೀಸನ್‌ 9ರಲ್ಲಿ ಒಂಟಿಯಾಗಿ ಆಟ ಆಡಿ ಮತ್ತೊಮ್ಮೆ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಆದರೂ ಈ ಬಾರಿ ಕೂಡ ದಿವ್ಯಾ ಅದೃಷ್ಟ ಕೈ ಕೊಟ್ಟಿದೆ. ಬಿಗ್ ಬಾಸ್ ಮನೆಯ ಆಟ ದಿವ್ಯಾ ಅವರಿಗೆ ಅಂತ್ಯವಾಗಿದೆ.

ಡಿಸೆಂಬರ್‌ 30 ಮತ್ತು 31ರಂದು ಬಿಗ್‌ ಬಾಸ್‌ ಗ್ರ್ಯಾಂಡ್‌ ಫಿನಾಲೆ ನಡೆಯಲಿದೆ. ದಿವ್ಯಾ ಎಲಿಮಿನೇಷನ್‌ ನಂತರ ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಮತ್ತು ರಾಕೇಶ್ ಅಡಿಗ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಯಾರಿಗೆ ಸಿಗಲಿದೆ ಬಿಗ್ ಬಾಸ್ ಪಟ್ಟ ಎಂದು ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ