ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಕೊಟ್ಟ ಮಾತಿಗೆ ತಪ್ಪಿದ್ದೇನೆ ದಯವಿಟ್ಟು ಕ್ಷಮಿಸಿ' - ಸಂಸದ ಪ್ರತಾಪ್ ಸಿಂಹ

Twitter
Facebook
LinkedIn
WhatsApp
‘ಕೊಟ್ಟ ಮಾತಿಗೆ ತಪ್ಪಿದ್ದೇನೆ ದಯವಿಟ್ಟು ಕ್ಷಮಿಸಿ’ – ಸಂಸದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒನ್ ವೇ ಸಂಚಾರಕ್ಕೆ ಆಗಸ್ಟ್​ 15ರಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಸದ್ಯ ದಶಪಥ ಕಾಮಗಾರಿ ವಿಳಂಬಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಕೋರಿದ್ದು, ಕೊಟ್ಟ ಮಾತಿಗೆ ತಪ್ಪಿದ್ದೇನೆ ಎಂದಿದ್ದಾರೆ.

ಈ ಕುರಿತಂತೆ ಫೇಸ್​​ಬುಕ್​ನಲ್ಲಿ ಬರೆದುಕೊಂಡಿರೋ ಪ್ರತಾಪ್ ಸಿಂಹ ಅವರು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ. ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈಸೂರು ದಶಪಥ ರಸ್ತೆಯಲ್ಲಿ ಟೆಸ್ಟ್​ ಡ್ರೈವ್​ ಮಾಡಿದ್ದರು. ಆಗಸ್ಟ್ 11 ರಂದು ಮಂಡ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿಎಂ ಅವರು ಬೆಂಗಳೂರಿಗೆ ವಾಪಸ್ ಆಗೋ ವೇಳೆ, ಚನ್ನಪಟ್ಟಣದ ಬೈರಾಪಟ್ಟಣದಿಂದ ಬೆಂಗಳೂರಿನವರೆಗು ಎಕ್ಸ್‌ಪ್ರೆಸ್ ವೇ ಮೂಲಕವೇ ಸಂಚರಿಸಿದ್ದರು. ನಿಡಘಟ್ಟದ ಬಳಿ ಕೊನೆ ಹಂತದ ಕಾಮಗಾರಿ ನಡೆಯುತ್ತಿದ್ದ ಕಾರಣಕ್ಕೆ ಬೈರಾಪಟ್ಟಣದಿಂದ ಬೆಂಗಳೂರಿನ ಕ್ರೈಸ್ತ ಕಾಲೇಜಿನವರೆಗೂ ಸಂಚರಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ