ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿನಲ್ಲಿ ಮೇರಿಯಂಡ ಸಂಕೇತ್‌ ಪೂವಯ್ಯ ಜೆಡಿಎಸ್‌ ಗೆ ಗುಡ್ ಬೈ. ಕಾಂಗ್ರೆಸ್ ಗೆ ಸೇರ್ಪಡೆ.

Twitter
Facebook
LinkedIn
WhatsApp
WhatsApp Image 2023 02 21 at 11.47.35 AM

ಹಲವು ವರ್ಷಗಳಿಂದ ಜೆಡಿಎಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ ಹಾಗೂ ಕಳೆದ ಬಾರಿ ಎಂಎಲ್‌ಎ ಚುನಾವಣೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಂಕೇತ್‌ ಪೂವಯ್ಯ ಇಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ ದೇವೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಸಂಕೇತ್‌ ಪೂವಯ್ಯ ಹೇಳಿಕೆ ನೀಡಿದ್ದಾರೆ.

ನಾಳೆ ವಿರಾಜಪೇಟೆಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದಲ್ಲಿ ಕಾಂಗ್ರೆಸ್‌ ಸೇರುವುದಾಗಿ ಸಂಕೇತ್‌ ಪೂವಯ್ಯ ಮಾಹಿತಿ ನೀಡಿದ್ದಾರೆ.

ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ