ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಡಗಿನ ಕಾಫಿಗೆ ವಿಶ್ವ ಮಾನ್ಯತೆ ಒದಗಿಸುವುದು ನನ್ನ ಸಂಕಲ್ಪ. ಕಾಫಿ ದಸರಾ ಆ ದಾರಿಯಲ್ಲಿ ಹೊಸ ಆರಂಭ: ಡಾ. ಮಂತರ್ ಗೌಡ

Twitter
Facebook
LinkedIn
WhatsApp
ಕೊಡಗಿನ ಕಾಫಿಗೆ Dr. Mantar Gowda

ಮಡಿಕೇರಿ: ಬ್ರೆಜಿಲ್ ದೇಶದಂತೆ ಕೊಡಗಿನ ಕಾಫಿಗೆ ವಿಶ್ವ ಮಾನ್ಯತೆ ಒದಗಿಸುವುದು ನನ್ನ ಮುಖ್ಯ ಗುರಿಗಳಲ್ಲಿ ಒಂದು. ಕೊಡಗಿನ ಕಾಫಿ ಗುಣಮಟ್ಟದಲ್ಲಿ ಉತ್ಕೃಷ್ಟವಾಗಿದೆ. ಅದನ್ನು ನಾವು ಬಹುದೊಡ್ಡ ಬ್ರಾಂಡ್ ಮಾಡಬೇಕಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಯಪಟ್ಟಿದ್ದಾರೆ.

ಅವರು ಕೊಡಗಿನ ಕಾಫಿ ದಸರಾದ ಕುರಿತಂತೆ, ದಸರಾ ಸಮಿತಿ, ಕಾಫಿ ಬೆಳೆಗಾರರ ಸಂಘ , ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಹಾಗೂ ಇತರ ಸಂಘ ಸಂಸ್ಥೆಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ ಈ ವಿಷಯ ತಿಳಿಸಿದ್ದಾರೆ. ಕೊಡಗಿನ ಕಾಫಿಗೆ ಹೊಸ ದಿಕ್ಕನ್ನು ನೀಡಲು ನಾವು ಈ ಬಾರಿ ಕಾಫಿ ದಸರಾವನ್ನು ಆರಂಭ ಮಾಡಿದ್ದೇವೆ. ಇದು ಆರಂಭವಷ್ಟೇ. ಇನ್ನಷ್ಟು ಕಾಫಿ ಕುಡಿತಾದ ಹಾಗೂ ಬೆಳೆಗಾರರ ಕುರಿತಾದ ಕಾರ್ಯಕ್ರಮಗಳನ್ನು ನಾವು ಹಮ್ಮಿಕೊಳ್ಳಲಿದ್ದೇವೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಕೊಡಗಿನ ಕಾಫಿಯ ಮೂಲಕ ರೈತರು ಹಾಗೂ ಯುವಕರಿಗೆ ಸಾವಿರಾರು ಉದ್ಯೋಗವಕಾಶಗಳನ್ನು ನಾವು ಒದಗಿಸಬಹುದು. ಈ ಕಲ್ಪನೆ ಆಧಾರದ ಮೇಲೆ ನಾವು ವಿಶ್ವಮಾನ್ಯವಾದ ಕೊಡಗಿನ ಕಾಫಿಯ ಬ್ರಾಂಡನ್ನು ಸೃಷ್ಟಿಸಬೇಕಾಗಿದೆ ಎಂದು ಅವರು ಮಾಧ್ಯಮದ ಮುಂದೆ ಅಭಿಪ್ರಾಯ ಪಟ್ಟಿದ್ದಾರೆ.

ಕೊಡಗಿನ ಕಾಫಿ ದಸರಾದ ಕುರಿತಾಗಿ ಇಡೀ ರಾಜ್ಯ ಹಾಗೂ ದೇಶದಲ್ಲಿ ಪ್ರಚಾರದ ಬಗ್ಗೆ ಎಲ್ಲರ ಸಹಕಾರವನ್ನು ಅವರು ಕೋರಿದ್ದಾರೆ. ಕೊಡಗಿನ ಅಸ್ಮಿತೆಯ ಸಂಕೇತವಾದ ಕಾಫಿಯನ್ನು ಬಹುದೊಡ್ಡ ಮಾರುಕಟ್ಟೆ ಸೃಷ್ಟಿಸಲು ದಸರಾ ಸಮಿತಿ, ಕರ್ನಾಟಕ ಬೆಳೆಗಾರರ ಸಂಘ , ಕಾಫಿ ಬೋರ್ಡ್ , ಕೊಡಗು ಕಾಫಿ ಪ್ಲಾಂಟರ್ ಎಸೋಶಿಯೇಶನ್ ನಮ್ಮೊಂದಿಗೆ ಕೈಜೋಡಿಸಿರುವುದು ಬಹಳಷ್ಟು ಸಂತೋಷದ ವಿಷಯ ಎಂದು ಅವರು ಮಾಧ್ಯಮದೊಂದಿಗೆ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ:

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಈ ಬಗ್ಗೆ ಸಚಿವ ಸಂಪುಟವು ವಿಸ್ತೃತ ಚರ್ಚೆ ನಡೆಸಿದ್ದು ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.

ಇತ್ತೀಚೆಗೆ ಅರಣ್ಯ ಇಲಾಖೆ ಆಯೋಜಿಸಿದ್ದ ಸಮಾಲೋಚನೆಯಲ್ಲಿ, ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್‌ಎ) ಹೊರಡಿಸಲಾಗಿದ್ದ ಆರನೇ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಾದ್ಯಂತ ಪಶ್ಚಿಮ ಘಟ್ಟಗಳ 56,825.7 ಚದರ ಕಿಲೋಮೀಟರ್‌ಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಕೇಂದ್ರ ಪರಿಸರ ಸಚಿವಾಲಯವು 2014ರ ಮಾರ್ಚ್ ನಿಂದ ಆರು ಕರಡು ಅಧಿಸೂಚನೆಗಳನ್ನು ಹೊರಡಿಸಿದೆ. ಆದರೆ, ರಾಜ್ಯಗಳ ಆಕ್ಷೇಪದಿಂದಾಗಿ ಅಂತಿಮ ಅಧಿಸೂಚನೆ ಇನ್ನೂ ಬಾಕಿ ಉಳಿದಿದೆ.

ಒಟ್ಟಾರೆಯಾಗಿ, ಅಧಿಸೂಚನೆಯು ಗುಜರಾತ್‌ನಲ್ಲಿ 449 ಚದರ ಕಿಲೋಮೀಟರ್, ಮಹಾರಾಷ್ಟ್ರದಲ್ಲಿ 17,340 ಚದರ ಕಿಲೋಮೀಟರ್, ಗೋವಾದಲ್ಲಿ 1,461 ಚದರ ಕಿಲೋಮೀಟರ್, ಕರ್ನಾಟಕದಲ್ಲಿ 20,668 ಚದರ ಕಿಲೋಮೀಟರ್, ತಮಿಳುನಾಡಿನಲ್ಲಿ 6,914 ಚದರ ಕಿಲೋಮೀಟರ್ ಮತ್ತು ಕೇರಳದಲ್ಲಿ 9,993.7 ಚದರ ಕಿಲೋಮೀಟರ್‌ಗಳನ್ನುಇಎಸ್‌ಎ ಆಗಿ ಘೋಷಿಸಲು ಪ್ರಸ್ತಾಪಿಸಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ:

ಕೊಪ್ಪಳ: ಕಂದಾಯ ಸೇವೆ (Revenue Department) ನೀಡಲು ಅಗತ್ಯ ಮೂಲ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಗ್ರಾಮಾಡಳಿತ ನೌಕರರ ಸಂಘದಿಂದ ಜಿಲ್ಲಾದ್ಯಂತ ಗುರುವಾರ ಪ್ರತಿಭಟನೆ (Protest) ನಡೆಯಿತು.

ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕೊಪ್ಪಳ (Koppala) ತಾಲೂಕು ಹಾಗೂ ಗ್ರಾಮಾಡಳಿತ ನೌಕರರ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸರ್ಕಾರದ ಕಂದಾಯ ಇಲಾಖೆ ಮೂಲಕ 21 ವಿವಿಧ ಪ್ರಮಾಣ ಪತ್ರ ಮತ್ತು ಸೌಲಭ್ಯ ನೀಡುತ್ತದೆ. ಇದನ್ನು ತಂತ್ರಾಶದಲ್ಲಿ ದಾಖಲು ಮಾಡಿ, ಸೇವೆ ನೀಡಬೇಕಿದೆ. ಆದರೆ ಗ್ರಾಮ ಆಡಳಿತಾಧಿಕಾರಿಗಳಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಸೇವೆ ನೀಡುವುದು ಕಷ್ಟಸಾಧ್ಯವಾಗುತ್ತಿದೆ. ಈ ಹಿನ್ನೆಲೆ ಕೂಡಲೇ ಸರ್ಕಾರ ಕಂಪ್ಯೂಟರ್, ಇಂಟರ್‌ನೆಟ್ ಸೇರಿ ಮೂಲಸೌಲಭ್ಯ ಕಲ್ಪಿಸಬೇಕು. ಶಿಷ್ಠಾಚಾರದ ಕೆಲಸಕ್ಕೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ರಿಯಾಯಿತಿ ನೀಡಬೇಕು. ಹಕ್ಕು ಬದಲಾವಣೆ ಮಾಡುವ ಅವಧಿ ವಿಸ್ತರಣೆ ಮಾಡಬೇಕು. ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಜಾರಿ: ಸಿದ್ದರಾಮಯ್ಯ, ಪ್ರಭಾಕರ್​ಗೆ KUWJ ಅಭಿನಂದನೆ:

ಬೆಂಗಳೂರು, ಸೆಪ್ಟೆಂಬರ್​ 27: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ (Journalist Free Bus Pass) ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ.

ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.

ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ನಿರಂತರವಾಗಿ ಕೆಯುಡಬ್ಲೂಜೆ ಮಾಡಿದ ಹೋರಾಟದ ಲವಾಗಿ ಯೋಜನೆ ಸಕಾರಗೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪ್ರಯತ್ನವೂ ಮಹತ್ವದ್ದು ಎಂದು ತಗಡೂರು ತಿಳಿಸಿದ್ದಾರೆ.

ನುಡಿದಂತೆ ನಡೆದು, ಉಚಿತ ಬಸ್ ಪಾಸ್ ಜಾರಿಗೆ ಬರಲು ಕಾರಣರಾದ ಸಿಎಂ ಸಿದ್ದರಾಮಯ್ಯ, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಸೇರಿದಂತೆ ಸಹಕಾರ ಕೊಟ್ಟ ಎಲ್ಲರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೃತಜ್ಞತೆಗಳು ಸಲ್ಲುತ್ತವೆ ಎಂದು ಅವರು ತಿಳಿಸಿದ್ದಾರೆ.

ಯೋಜನೆ ಮೊದಲು ರೂಪುಗೊಂಡು ಜಾರಿಗೆ ಬರಲಿ ಎನ್ನುವುದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮೊದಲ ಆದ್ಯತೆ ಆಗಿತ್ತು. ನಿಯಮಾವಳಿಗಳಲ್ಲಿ ಒಂದಿಷ್ಟು ಕಠಿಣ ಷರತ್ತುಗಳಿರುವುದು ಗಮನಕ್ಕೆ ಬಂದಿದೆ. ಕಾರ್ಯ ನಿರತ ಪತ್ರಕರ್ತರಿಗೆ ಎಲ್ಲರಿಗೂ ಉಚಿತ ಬಸ್ ಪಾಸ್ ಸಿಗಬೇಕು ಎನ್ನುವ ನಿಟ್ಟಿನಲ್ಲಿ ನಿಯಮಾವಳಿ ಸರಳೀಕರಣಕ್ಕೆ ಸಂಘವು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಡಿಯನ್ ರೋಡ್ ಕಾಂಗ್ರೆಸ್​​ ಗೆ ನಿತಿನ್ ಗಡ್ಕರಿ ವಿಶೇಷ ಸೂಚನೆ:

ಬೆಂಗಳೂರು: ದೇಶದ ಮೂಲಸೌಕರ್ಯ ನಿರ್ಮಾಣದ ತಾಂತ್ರಿಕ ಅಂಶಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡುತ್ತಾ ಬಂದಿರುವ 90 ವರ್ಷಗಳಷ್ಟು ಹಳೆಯದಾದ ಇಂಡಿಯನ್ ರೋಡ್ ಕಾಂಗ್ರೆಸ್ ರಾಜಕೀಯ ಪಕ್ಷದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಟೀಕಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಇಂಡಿಯನ್ ರೋಡ್ ಕಾಂಗ್ರೆಸ್ ಆಯೋಜಿಸಿದ್ದ ಅಡ್ವಾನ್ಸ್ ಇನ್ ಬ್ರಿಡ್ಜ್ ಮ್ಯಾನೇಜ್ ಮೆಂಟ್ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂಡಿಯನ್ ರೋಡ್ ಕಾಂಗ್ರೆಸ್ ರಾಜಕೀಯ ಪಕ್ಷದಂತೆ ಕೆಲಸ ಮಾಡುತ್ತಿದ್ದೀರಿ ಎಂದು ಅನಿಸುತ್ತದೆ.

ಇದು ವೃತ್ತಿಪರ ಸಂಸ್ಥೆಯಾಗಿದ್ದು, ಪ್ರಯೋಗಾಲಯಗಳೊಂದಿಗೆ ಶಾಶ್ವತ ಕಚೇರಿ ಹೊಂದಿರಬೇಕು. ಸಂಶೋಧನೆ ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿರುವ ಜನರನ್ನು ಪೂರ್ಣವಧಿ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಮತ್ತು ಅವರ ಅನುಭವ ಮತ್ತು ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇಂಡಿಯನ್ ರೋಡ್ ಕಾಂಗ್ರೆಸ್ ಉತ್ತಮ ಕಾರ್ಯನಿರ್ವಹಣೆಗೆ ಜಾಗ ಮತ್ತು ಅನುದಾನವನ್ನು ಒದಗಿಸಲಾಗುವುದು. ಆದರೆ ನೀವು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಂಘಟನೆಯಾಗಿರಬೇಕು. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಇದಕ್ಕೆ ಕೊಡುಗೆ ನೀಡುತ್ತವೆ ಎಂಬ ವಿಶ್ವಾಸ ನನಗಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist