ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊನೆಗೂ ಜಯನಗರದ ಫಲಿತಾಂಶ ಪ್ರಕಟ: ಬಿಜೆಪಿ ಗೆಲುವು - ಸೌಮ್ಯಾ ರೆಡ್ಡಿ ಕಣ್ಣೀರು!

Twitter
Facebook
LinkedIn
WhatsApp
ಬೆಂಗಳೂರು: ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರದಲ್ಲಿ ಬಿಜೆಪಿ  ಅಭ್ಯರ್ಥಿ ರಾಮಮೂರ್ತಿ  ಗೆಲುವು ತನ್ನದಾಗಿಸಿಕೊಂಡಿದ್ದಾರೆ.
 
ಕೇವಲ 16 ಮತಗಳ ಅಂತರದಿಂದ ರಾಮಮೂರ್ತಿಗೆ ಜಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ

ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್  ಕಾರ್ಯಕರ್ತರು ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ. ಮೋಸ.. ಮೋಸ ಬಿಜೆಪಿ ಅಂತ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇನ್ನು ಕೌಂಟಿಂಗ್ ಸೆಂಟರ್ ಮುಂಭಾಗ ಸೌಮ್ಯಾ ರೆಡ್ಡಿ  ಕಣ್ಣೀರು ಹಾಕಿದ್ದಾರೆ. ಅಲ್ಲದೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ರೀಕೌಂಟಿಂಗ್‍ನಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನೆಲೆಯಲ್ಲಿ ಜಯನಗರ ಕೌಂಟಿಂಗ್ ಸೆಂಟರ್ ಬಳಿ ಹೈಡ್ರಾಮಾ ನಡೆದಿತ್ತು. ಕೌಂಟಿಂಗ್ ಸೆಂಟರ್ ಬಳಿ ಡಿಕೆ ಬ್ರದರ್ಸ್ ಕೂಡ ದೌಡಾಯಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಾಂಗ್ರೆಸ್ ಮುಖಂಡರು ವಾಗ್ವಾದ ಕೂಡ ನಡೆಸಿದ್ದಾರೆ. ಗೇಟ್ ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.

1989 ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಯನಗರ, 2008, 2013 ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ಜಯನಗರ ಕ್ಷೇತ್ರಕ್ಕೆ ಸೌಮ್ಯರೆಡ್ಡಿ ಎಂಟ್ರಿ ಕೊಟ್ಟರು. ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. 2018 ಚುನಾವಣೆಯಲ್ಲಿ ಗೆದ್ದು, ಮತ್ತೆ 2023 ರ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಸೋಲು ಕಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ