ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಪ್ಪಳದಲ್ಲಿ 30 ವರ್ಷದ ದಲಿತ ಯುವತಿ ಮೇಲೆ ಚಪ್ಪಲಿಯಿಂದ ಹಲ್ಲೆ

Twitter
Facebook
LinkedIn
WhatsApp
ambedkar

ಕೊಪ್ಪಳಹೊಲದಲ್ಲಿ ದನ ನುಗ್ಗಿತೆಂಬ ಕಾರಣಕ್ಕೆ ದಲಿತ ಮಹಿಳೆಯೊಬ್ಬರ ಮೇಲೆ ಮೇಲ್ಜಾತಿಯ ವ್ಯಕ್ತಿ ಚಪ್ಪಲಿಯಿಂದ ಹೊಡೆದ ಘಟನೆ (Dalit Assaulted In Koppala) ಕೊಪ್ಪಳದ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವುದು ಬೆಳಕಿಗೆ ಬಂದಿದೆಆರೋಪಿ ಅಮರೇಶಪ್ಪ ಕುಂಬಾರ ಎಂಬುವನ ಹೊಲಕ್ಕೆ ಹಸು ಮೇಯಲು ಹೋಗಿತ್ತುಅದನ್ನು ಅಮರೇಶಪ್ಪ ಕಟ್ಟಿಹಾಕಿದ್ದಹಸುವಿನ ಮಾಲಕಿ ಶೋಭಮ್ಮ ಹರಿಜನ ಅಲ್ಲಿಗೆ ಹೋದಾಗ ಆರೋಪಿ ಹಲ್ಲೆ ಎಸಗಿದ್ದಾನೆಅವಾಚ್ಯ ಶಬ್ದಗಳಿಂದ ನಿಂದನೆ ಕೂಡ ಮಾಡಿದ್ದಾನೆಈ ಘಟನೆ ಫೆಬ್ರುವರಿ 3ರಂದು ಸಂಭವಿಸಿದೆಗಾಯಗೊಂಡ 30 ವರ್ಷದ ದಲಿತ ಮಹಿಳೆ ಶೋಭಮ್ಮ ಅವರನ್ನು ಕೊಪ್ಪಳದ ಗಂಗಾವತಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಶೋಭಮ್ಮರ ಮೇಲೆ ಅಮರೇಶಪ್ಪ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಕೂಡ ಆಗಿದೆಕನಕಗಿರಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಎಸ್​ಸಿ ಎಸ್​ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿದ್ದೇವೆತನ್ನ ಹಸುವನ್ನು ಬಿಡಿಸಿಕೊಳ್ಳಲು ಮಹಿಳೆಯು ಅರೋಪಿ ಅಮರೇಶನ ಮನೆಗೆ ಹೋದಾಗ ಆತನ ಚಪ್ಪಲಿಯಿಂದ ಹೊಡೆದಿದ್ದಾನೆಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಆಕೆಯ ಸಮುದಾಯವನ್ನು ಅವಮಾನ ಮಾಡಿದ್ದಾನೆಈ ಘಟನೆಯ ವಿಡಿಯೋ ವೈರಲ್ ಆಗಿದೆಈ ಘಟನೆ ಬಳಿಕ ಮಹಿಳೆಯ ಸಂಬಂಧಿಕರು ಅಮರೇಶ ಮನೆಗೆ ಹೋಗಿ ಮಾತನಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಆರೋಪಿ ಅಮರೇಶ ಕುಂಬಾರನ ಈ ವರ್ತನೆ ಅದೇ ಹೊಸತಲ್ಲ ಎಂಬುದು ಹಲ್ಲೆಗೊಳಗಾದ ದಲಿತ ಮಹಿಳೆಯ ಕುಟುಂಬಸ್ಥರು ಹೇಳುವ ಮಾತುಆತ ಮೊದಲಿಂದಲೂ ದಲಿತ ಸಮುದಾಯವನ್ನು ನಿಂದಿಸುತ್ತಾ ಬರುತ್ತಿದ್ದಾನೆಆತನ ಮೇಲೆ ಕ್ರಮ ಜರುಗಿಸಬೇಕು ಎಂದು ಗ್ರಾಮದ ದಲಿತರು ಒತ್ತಾಯಿಸಿದ್ದಾರೆ.

ದಲಿತರ ಮೇಲೆ ನಿಲ್ಲದ ದೌರ್ಜನ್ಯ

ರಾಜ್ಯದಲ್ಲಿ ವಿವಿಧೆಡೆ ದಲಿತರ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇವೆಕೊಪ್ಪಳದ ಈ ಮೇಲಿನ ಘಟನೆಯ ರೀತಿಯಲ್ಲೇ ಕಳೆದ ವಾರ ಹಾಸನದಲ್ಲಿ ನಡೆದಿತ್ತುಕಾಫಿ ಬೀಜ ಕದಿಯಲು ಬಂದಿದ್ದ ಎಂದು ಆರೋಪಿಸಿ ಕಾಫಿ ತೋಟದ ಮಾಲೀಕರು ಯುವಕನೊಬ್ಬನನ್ನು ಹಿಡಿದು ಕೈಕಾಲು ಕಟ್ಟಿ ಅಮಾನವೀಯವಾಗಿ ಥಳಿಸಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೆಹಳ್ಳಿ ಬಳಿಯ ಬೆಳ್ಳಾವರ ಗ್ರಾಮದಲ್ಲಿ ನಡೆದಿತ್ತು.

ಆ ದಲಿತ ಯುವಕನ ಮೇಲೆ ಹಲವಾರು ಮಂದಿ ಸೇರಿ ಮನಬಂದಂತೆ ಹಲ್ಲೆ ಎಸಗಿದ್ದರುನಾಯಿಯಿಂದಲೂ ಆತನ ಮೇಲೆ ದಾಳಿ ಮಾಡಿಸಿದ ಪೈಶಾಚಿಕ ಘಟನೆ ನಡೆದಿತ್ತುಪೊಲೀಸರು ಆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದರು.

ಗೋಮೂತ್ರದಿಂದ ನೀರಿನ ತೊಟ್ಟಿ ಸ್ವಚ್ಛ

ದಲಿತ ಮಹಿಳೆಯೊಬ್ಬಳು ನೀರು ಕುಡಿದಳೆಂದು ನೀರಿನ ತೊಟ್ಟಿಯನ್ನು ಗೋಮೂತ್ರ ಹಾಕಿ ಸ್ವಚ್ಛಗೊಳಿಸಿದ ಘಟನೆಯೂ ಇತ್ತೀಚೆಗೆ ಚಾಮರಾಜನಗರದ ಹೆಗ್ಗೋತರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆಆ ಘಟನೆ ನಡೆದ ಬಳಿಕ ಚಾಮರಾಜನಗರದ ತಹಶೀಲ್ದಾರ್ ಬಸವರಾಜು ಮತ್ತು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನೇತೃತ್ವದಲ್ಲಿ ದಲಿತ ಸಮುದಾಯದವರು ಎಲ್ಲಾ ನೀರಿನ ತೊಟ್ಟಿಗಳಿಗೂ ಹೋಗಿ ನೀರು ಕುಡಿದು ಬಂದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ