ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಪ್ಪಳ: ಮಹಿಳೆ ಕೊಲೆ, ಅಪರಾಧಿಗೆ ಜೀವಾವಧಿ ಶಿಕ್ಷೆ

Twitter
Facebook
LinkedIn
WhatsApp
death verdict1668806642

ಕೊಪ್ಪಳ(ಫೆ.04):  ಮಹಿಳೆಯನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕಲಕಬಂಡಿ ಗ್ರಾಮದ ಈಶಪ್ಪ ಮುದಿಗೌಡ್ರ ಎಂಬಾತ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಲಾಗಿದೆ.

ಪ್ರಕರಣ ಏನು?:

ಯಲಬುರ್ಗಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಲಕಬಂಡಿ ಗ್ರಾಮದ ನಿವಾಸಿ ಮುತ್ತವ್ವ ಈಕೆಯು ಈಗ್ಗೆ ಸುಮಾರು ಎರಡೂವರೆ ವರ್ಷಗಳಿಂದ ಈಶಪ್ಪ ಮುದೇಗೌಡ್ರ ಈತನೊಂದಿಗೆ ಸಂಬಂಧವನ್ನಿಟ್ಟುಕೊಂಡು ಬಂದಿದ್ದು, ಬಳಿಕ ಮುತ್ತವ್ವ ಈಶಪ್ಪನ ಜತೆ ಸಂಬಂಧ ಬಿಟ್ಟಿದ್ದರು. ಹೀಗಾಗಿ ಮುತ್ತವ್ವ ಮೇಲೆ ದ್ವೇಷದಿಂದ ಕೊಲೆ ಮಾಡಿದ್ದ. ಈ ಕುರಿತು ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಐ ನಾಗರಾಜ ಕಮ್ಮಾರ ಅವರು ತನಿಖೆ ಮಾಡಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಸಲ್ಲಿಸಿದ್ದರು.

ಪ್ರಕರಣದಲ್ಲಿ ಕಲಕಬಂಡಿ ಗ್ರಾಮದ ಈಶಪ್ಪನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಎಸ್‌. ರೇಖಾ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ನಾಗರಾಜ ಆಚಾರ್‌, ಅಂಬಣ್ಣ ಟಿ. ಮತ್ತು ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣಾ ಎಂ. ಅವರು ವಾದಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ