ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೊವಿಡ್ ನಿಯಂತ್ರಣಕ್ಕಾಗಿ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಕೊರೊನಾ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ನಮ್ಮ ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕರ್ನಾಟಕದಲ್ಲಿ 4ನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಯಾವುದೇ ನಿರ್ಧಾರದ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು. ದೆಹಲಿ, ಕೇರಳ, ಮಹಾರಾಷ್ಟ್ರ ರಾಜ್ಯಗಳ ಬೆಳವಣಿಗೆಗಳ ಕುರಿತ ದತ್ತಾಂಶವನ್ನೂ ತರಿಸಿ, ಪರಿಶೀಲಿಸುತ್ತೇವೆ. ಅನಗತ್ಯವಾಗಿ ಟೆಸ್ಟಿಂಗ್ ಪ್ರಮಾಣ ಹೆಚ್ಚಳ ಮಾಡುವುದಿಲ್ಲ. ಏರ್ಪೋರ್ಟ್ಗಳಲ್ಲಿ ಹಿಂದೆ ಹೊರಡಿಸಿದ ಮಾರ್ಗಸೂಚಿ ಅನ್ವಯ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ವಿವರಿಸಿದರು.
ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ಪರಿಶೀಲನೆ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಂದಾಯ ಸಚಿವ, ಆರೋಗ್ಯ ಸಚಿವ, ಐಟಿ-ಬಿಟಿ ಸಚಿವರು, ಸಿಎಸ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು, ಆರ್ಥಿಕ ಇಲಾಖೆ ACS, ತಾಂತ್ರಿಕ ಸಲಹಾ ಸಮಿತಿಗೆ ಸಭೆಗೆ ಆಹ್ವಾನಿಸಲಾಗಿದೆ.
ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star) ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ
ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್
ಅಕ್ಟೋಬರ್ 17 ರಂದು ಭಾರತೀಯ ಮಾರುಕಟ್ಟೆಗೆ ಬರಲಿದೆ Google Pixel 9 Pro Twitter Facebook LinkedIn WhatsApp Google Pixel 9 Pro: ಗೂಗಲ್ ಪಿಕ್ಸೆಲ್ 9 ಪ್ರೊ ಅಕ್ಟೋಬರ್ 17 ರಂದು