ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೋನಾ ನಿಯಂತ್ರಣಕ್ಕೆ ಹೆಚ್ಚುವರಿ ನಿಯಮಾವಳಿಗಳನ್ನು ಜಾರಿಗೆ ತಂದ ದಕ್ಷಿಣ ಕನ್ನಡ ಜಿಲ್ಲಾಡಳಿತ

Twitter
Facebook
LinkedIn
WhatsApp
ಸರ್ಕಾರದ ಆದೇಶದಂತೆ ಕಟ್ಟುನಿಟ್ಟಿನ ಕರ್ಫ್ಯೂ ದಕ್ಷಿಣಕನ್ನಡದಲ್ಲಿ ಜಾರಿ-ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 05-01-2022ರ ರಾತ್ರಿ ಗಂಟೆ 10 ರಿಂದ ದಿನಾಂಕ: 19-01-2022ರ ಬೆಳಿಗ್ಗೆ ಗಂಟೆ 5 ರವರೆಗೆ ಅನ್ವಯವಾಗುವಂತೆ ಹೆಚ್ಚುವರಿ ನಿಯಂತ್ರಣ ಕ್ರಮಗಳು ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

1. ಜಿಲ್ಲೆಯಾದ್ಯಂತ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
2. ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ ಗಂಟೆ 5 ರವರೆಗೆ ಜಾರಿಯಲ್ಲಿರುತ್ತದೆ.
3. ಈ ಅವಧಿಯಲ್ಲಿ ಎಲ್ಲಾ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಮಾತ್ರ ಕಾರ್ಯನಿರ್ವಹಿಸಬೇಕು.
4. ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ಕ್ರಮಕೈಗೊಳ್ಳಬೇಕು.
5.ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು 50%ಕ್ಕೆ ಮಿತಿಗೊಳಿಸಿ ಪಬ್‌ಗಳು, ಕ್ಲಬ್‌ಗಳು/ ರೆಸ್ಟೋರೆಂಟ್‌ಗಳು ಬಾರ್‌ಗಳು ಹೋಟೆಲ್‌ಗಳು ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿಗೆ ಅನುಮತಿ ನೀಡಲಾಗಿದೆ.
6. ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಅಸನ ಸಾಮರ್ಥ್ಯವನ್ನು 50%ಕ್ಕೆ ಮಿತಿಗೊಳಿಸಿ ಎಲ್ಲಾ ಸಿನಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು, ರಂಗಮAದಿರಗಳು, ಅಡಿಟೋರಿಯಮ್ ಗಳು ಮತ್ತು ಇತರ ಸಭಾಂಗಣಗಳು ಕಾರ್ಯಾಚರಿಸಬೇಕು.
7, ರಾಜ್ಯ ಸರ್ಕಾರ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತ ಕೋವಿಡ್ ಸಮುಚಿತ ವರ್ತನಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರು ಮತ್ತು ಒಳಾಂಗಣ ಪ್ರದೇಶಗಳಲ್ಲಿ 100 ಜನರು ಮೀರದಂತೆ ಮದುವೆಯನ್ನು ನಡೆಸಲು ಅನುಮತಿಸಲಾಗಿದೆ.
8. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅನುಮತಿಸಿದ್ದು, ಯಾವುದೇ ಸೇವೆ ಇತ್ಯಾದಿಗಳನ್ನು ಅನುಮತಿಸಲಾಗುವುದಿಲ್ಲ, ನಿಗದಿಪಡಿಸಲಾದ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 50 ಜನರಿಗೆ ಮಾತ್ರ ಅನುಮತಿಸಿದೆ.
9. ವಾರದ 5 ದಿನಗಳಲ್ಲಿ ಎಂದಿನAತೆ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳು, ಎಲ್ಲಾ ಪ್ರತ್ಯೇಕವಾಗಿರುವ ಅಂಗಡಿಗಳು ಮತ್ತು ಸೂಕ್ತ ಕೋವಿಡ್ ಸಮುಚಿತ ವರ್ತನೆಗಳನ್ನು ದಾಳಿಸುವ ಶರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
10. ಪೂರ್ಣಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಈಜುಕೊಳಗಳಲ್ಲಿ ಮತ್ತು ಜಿಮ್‌ಗಳಲ್ಲಿ 50% ಸಾಮರ್ಥ್ಯದೊಂದಿಗೆ ಬಳಸಲು ಅನುಮತಿ ನೀಡಲಾಗಿದೆ.
11. ಶೇ.50ರ ಸಾಮರ್ಥ್ಯದೊಂದಿಗೆ ಕ್ರೀಡಾ ಸಂರ್ಕಿಣಗಳು ಹಾಗೂ ಸ್ಟೇಡಿಯಂಗಳು ಕಾರ್ಯನಿರ್ವಹಿಸಬೇಕು.
12.ಎಲ್ಲಾ ರ‍್ಯಾಲಿ, ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಸುತ್ತೋಲೆ ಅಥವಾ ಮಾರ್ಗಸೂಚಿಗಳ ಅನ್ವಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿ ಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯ ಕೈಗೊಳ್ಳಬೇಕು.

ವಾರಾಂತ್ಯದ ಕರ್ಪ್ಯೂ ಮಾರ್ಗಸೂಚಿಗಳು ಇಂತಿವೆ:
ಈ ಕೆಳಗೆ ತಿಳಿಸಲಾದ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 10 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯ ನಡುವೆ ವ್ಯಕ್ತಿಗಳ ಸಕಾರಣಗಳಿಲ್ಲದೆ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು ಪರಿಸ್ಥಿತಿಯಲ್ಲಿ ವ್ಯವಹರಿಸಲು ಅವಕಾಶವಿರುತ್ತದೆ. ಅಗತ್ಯ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದು ಮತ್ತು ಈ ಕುರಿತು ಸಂಬAಧಿಸಿ ಅಧಿಕಾರಿ / ಸಿಬ್ಬಂದಿಗಳಿಗೆ ಅನಿಯಂತ್ರಿತ ಚಲನೆಗೆ ಅನುಮತಿಸಿದೆ.

ಎಲ್ಲಾ ಸಾರ್ವಜನಿಕ ಉದ್ಯಾನವನಗಳನ್ನು ಮುಚ್ಚಲಾಗಿದೆ.
ಐಟಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ಕೈಗಾರಿಕೆಗಳಿಗೆ ಕರ್ಪ್ಯೂ ನಿರ್ಬಂಧದಿAದ ವಿನಾಯಿತಿ ನೀಡಿದೆ ಮತ್ತು ಅಂತಹ ಸಂಸ್ಥೆಗಳ ನೌಕರರ ಸಂಚಾರಕ್ಕೆ, ಅವರ ಸಂಬAಧಪಟ್ಟ ಸಂಸ್ಥೆ / ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿ ಹೊಂದಿಕೊAಡು ಪ್ರಯಾಣಿಸಲು ಅನುಮತಿಸಲಾಗಿದೆ.
ಕನಿಷ್ಠ ಪುರಾವೆಗಳೊಂದಿಗೆ ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯತೆಯ ಅವಶ್ಯಕತವಿರುವ ವ್ಯಕ್ತಿಗಳು, ಲಸಿಕೆಯನ್ನು ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹ ವ್ಯಕ್ತಿಗಳು ಚಲನೆಗೆ ಅನುಮತಿಸಲಾಗುವುದು.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವುಗಳೊಂದಿಗೆ ವ್ಯವಹರಿಸುವ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ತಮ್ಮ ಮನೆಗಳ ಹೊರಗೆ ವ್ಯಕ್ತಿಗಳ ಚಲನವಲನವನ್ನು ಕಡಿಮೆ ಮಾಡಲು ಎಲ್ಲಾ ವಸ್ತುಗಳ ಹೋಂ ಡೆಲವರಿಗೆ 24/7 ಪ್ರೋತ್ಸಾಹಿಸಲಾಗಿದೆ.

ಕಾರ್ಯಾಚರಣೆಗಳು ಕೋವಿಡ್-19 ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ದರಾಗಿರಬೇಕು, ರೆಸ್ಟೋರೆಂಟ್ ಮತ್ತು ತಿನಿಸುಗಳನ್ನು ತೆಗೆದುಕೊಂಡು ಹೋಗಲು ಮತ್ತು ಮನೆಗೆ ತಲುಪಿಸಲು ಮಾತ್ರ ಅನುಮತಿಸಲಾಗಿದೆ.
ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದ್ದು, ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣಗಳಿಗೆ, ಬಸ್ ಟರ್ಮಿನಲ್ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕೋವಿಡ್ 19 ಸೂಕ್ತವಾದ ನಡವಳಿಕೆ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತೆರೆದ ಸ್ಥಳಗಳಲ್ಲಿ 200 ಕ್ಕಿಂತ ಹೆಚ್ಚು ಜನರು ಮೀರದಂತೆ ಮತ್ತು ಮುಚ್ಚಿದ ಸ್ಥಳಗಳಲ್ಲಿ 100ಕ್ಕಿಂತ ಜನರು ಮೀರದಂತೆ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು