ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಹ್ಲಿಯ ಆರ್ಭಟಕ್ಕೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆ ಬ್ರೇಕ್

Twitter
Facebook
LinkedIn
WhatsApp
1654235744 images 19 1024x615 4

ಬುಧವಾರ (ಮಾ.22) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಭಾರ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಕೊಹ್ಲಿ 54 ರನ್​ ಬಾರಿಸಿ ಮಿಂಚಿದ್ದರು.

virat kohli, Virat Kohli: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14 ವರ್ಷ ಪೂರೈಸಿದ ವಿರಾಟ್‌ ಕೊಹ್ಲಿ! - former india captain virat kohli completes 14 years in international cricket - Vijaya Karnataka
 

ಈ 54 ರನ್​ಗಳೊಂದಿಗೆ ತವರಿನಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಮೇಲೇರಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ವಿಶೇಷ.

Ricky Ponting Shares Pictures Of His World Cup Jersey, Says "Can't Believe  It's Been 21 Years" | Cricket News

ಹೌದು, ರಿಕಿ ಪಾಂಟಿಂಗ್ ಆಸ್ಟ್ರೇಲಿಯಾದಲ್ಲಿ ಆಡಿದ 153 ಏಕದಿನ ಪಂದ್ಯಗಳಲ್ಲಿ 5406 ರನ್ ಗಳಿಸಿ ದಾಖಲೆ ಬರೆದಿದ್ದರು. ಇದೀಗ ಕೇವಲ 110 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.

 
 

ಕಿಂಗ್ ಕೊಹ್ಲಿ ಭಾರತದಲ್ಲಿ ಆಡಿದ 110 ಏಕದಿನ ಪಂದ್ಯಗಳ ಮೂಲಕ ಒಟ್ಟು 5447 ರನ್​ಗಳಿಸಿದ್ದಾರೆ. ಈ ಮೂಲಕ ಸ್ವದೇಶದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

Ricky Ponting | Biography, Stats, & Facts | Britannica

ಈ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಕ್ರಿಕೆಟ್ ದೇವರು ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 6,976 ರನ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದರು.

Virat Kohli 71st Century: ಮೂರು ವರ್ಷಗಳ ಬಳಿಕ ಕೊಹ್ಲಿ ಸೆಂಚುರಿ, ಟಿ20ಯಲ್ಲಿ ಮೊಟ್ಟಮೊದಲ ಶತಕ

 
 

ಇದೀಗ 5447 ರನ್​ ಬಾರಿಸಿರುವ ವಿರಾಟ್ ಕೊಹ್ಲಿಗೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು 1530 ರನ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ವರ್ಷಗಳಲ್ಲಿ ಮಾಸ್ಟರ್ ಬ್ಲಾಸ್ಟರ್ ಹೆಸರಿನಲ್ಲಿರುವ ಈ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದರೂ ಅಚ್ಚರಿಪಡಬೇಕಿಲ್ಲ.

Ricky Ponting denies rumours of retirement | The Independent | The  Independent

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ