ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?

Twitter
Facebook
LinkedIn
WhatsApp
ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ Siddaramaiah Covid Report

ಬೆಂಗಳೂರು : ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗದಿಂದ ಕಾವೇರಿ ನಿವಾಸದಲ್ಲಿ ವರದಿ ಸಲ್ಲಿಕೆ ಮಾಡಲಾಗಿದೆ.

ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್‌ ಶಾಕ್‌ ಸಿಗುವ ಸಾಧ್ಯತೆಯಿದೆ. ಕೋವಿಡ್‌ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್‌ (Congress) ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸರಚಿವರು ಸಮಾಲೋಚನೆ ನಡೆಸಿದ್ದಾರೆ.

ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ (John Michael DCunha) ನೇತೃತ್ವದ ಆಯೋಗ ತನಿಖಾ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ (ಕೋವಿಡ್ ಹಗರಣ) ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್‌ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು.

ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ವರದಿ ಬಹಿರಂಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ 2023ರ ಜುಲೈ 5ರಂದೇ ವರದಿ ಸಲ್ಲಿಸಿತ್ತು. 

ಬಿಜೆಪಿ ಅವಧಿಯಲ್ಲಿ ಕೋವಿಡ್ (COVID 19) ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು? ವಿಭಾಗವಾರು ಯಾವುದಕ್ಕೆ ಎಲ್ಲಾ ಹಣ ಖರ್ಚಾಗಿದೆ? ಏನೆಲ್ಲಾ ಖರೀದಿ ಆಗಿದೆ? ಎನ್.ಹೆಚ್.ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್ ಗಳನ್ನ ಒಳಗೊಂಡ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.

ಇದೀಗ ಆಯೋಗದ ತನಿಖಾ ವರದಿ ಬಳಿಕ ಅಂದಿನ ಸಿಎಂ, ಆರೋಗ್ಯ ಸಚಿವರಿಗೆ ಬಿಸಿ ತಟ್ಟುತ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ. ಸರ್ಕಾರದ ಮುಂದಿನ ಕ್ರಮದ ಬಗ್ಗೆ ಕಾದುನೋಡಬೇಕಿದೆ.

ಮಧ್ಯಂತರ ವರದಿಯಲ್ಲಿ ಏನಿದೆ?

ಬಾಕಿ ವರದಿ ನಿಗದಿತ ಸಮಯಕ್ಕೆ ಸಲ್ಲಿಸುವುದಾಗಿ ಉಲ್ಲೇಖಸಿಲಾಗಿದೆ. ಆಗಸ್ಟ್ 25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗದಿಂದ ಬಿಬಿಎಂಪಿ ವಿವಿಧ ವಲಯಗಳು ಹಾಗೂ ಇಲಾಖಾವಾರು ಭರಿಸಿರುವ ವೆಚ್ಚದ ಮಾಹಿತಿ ಉಲ್ಲೇಖಿಸಲಾಗಿದೆ. ಆರೋಗ್ಯ ಇಲಾಖೆಗೆ 1,754 ಕೋಟಿ ರೂ, ರಿಲೀಸ್ ಮಾಡಲಾಗಿತ್ತು. ರಾಷ್ಟ್ರೀಯ ಆರೋಗ್ಯ ಅಭಿಯಾನಕ್ಕೆ 1,406 ಕೋಟಿ ರೂ., ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ₹918 ಕೋಟಿ ರೂ., ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ 1,394 ಕೋಟಿ ರೂ. ವೈದ್ಯಕೀಯ ಸಲಕರಣೆಗಳ ಖರೀದಿಗೆ 1,394 ಕೋಟಿ ರೂ., ಔಷಧಗಳ ಖರೀದಿಗೆ 569 ಕೋಟಿ ರೂಪಾಯಿ ಬಿಡುಗಡೆ​ ಮಾಡಲಾಗಿತ್ತು.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ 264 ಕೋಟಿ ರೂ, ಬಿಬಿಎಂಪಿ ಕೇಂದ್ರ ಕಚೇರಿಗೆ 732 ಕೋಟಿ ರೂ. ಬಿಡುಗಡೆ. ದಾಸರಹಳ್ಳಿ ಬಿಬಿಎಂಪಿ ವಲಯಕ್ಕೆ 26 ಕೋಟಿ ರೂ., ಬಿಬಿಎಂಪಿ ಪೂರ್ವ ವಲಯಕ್ಕೆ 78 ಕೋಟಿ ರೂ., ಬಿಬಿಎಂಪಿ ಮಹದೇವಪುರ ವಲಯಕ್ಕೆ 48 ಕೋಟಿ ರೂ., ಬಿಬಿಎಂಪಿ ರಾಜರಾಜೇಶ್ವರಿ ವಲಯಕ್ಕೆ 31 ಕೋಟಿ ರೂ., ಬಾಕಿ ಉಳಿದ ಬೆಂಗಳೂರಿನ‌ ನಾಲ್ಕು ವಲಯಗಳು ಹಾಗೂ 31 ಜಿಲ್ಲೆಗಳ ವರದಿಯನ್ನ ಶೀಘ್ರ ಸಲ್ಲಿಸುವುದಾಗಿ ಉಲ್ಲೇಖಿಸಲಾಗಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್​ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.

ಇಂದು ಬೆಳಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಸುಮಾರು ಐದಾರು ಗಂಟೆಗಳ ಸುದೀರ್ಘ ವಾದ-ವಿವಾದ ಆಲಿಸಿದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಸೆಪ್ಟೆಂಬರ್ 2ಕ್ಕೆ ಮುಂದೂಡಿದ್ದು ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 

ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದರು. ಇನ್ನು ಹಿರಿಯ ವಕೀಲ​ ಕೆ.ಜಿ ರಾಘವನ್ ಸಹ ವಾದಮಂಡನೆಗೆ ಅವಕಾಶ ಕೋರಿದ್ದಾರೆ.

ಇಂದು ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ವಿವೇಚನೆ ಬಳಸಿಯೇ ಅನುಮತಿ ನೀಡಲಾಗಿದೆ ಎಂದು ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಬಳಿಕ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ವಾದ ಆರಂಭಿಸಿ, ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು. ನಂತರ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಲಾಯಿತು. ನಂತರ ಪ್ರತಿವಾದಿ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.

ವಾದ-ವಿವಾದದ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿಗಳು ಬಹಳ ಜನ ವಾದ ಮಂಡನೆ ಮಾಡಿದ್ದೀರಿ. ಆದರೆ ಇದರಲ್ಲಿ ಸಿಎಂ ಪಾತ್ರ ಏನು ಎಂದು ಯಾರು ಹೇಳುತ್ತಿಲ್ಲ. ಸಿಎಂ ಪಾತ್ರದ ಬಗ್ಗೆ ನಿಮ್ಮ ಉತ್ತರವೇನು ಎಂದು ದೂರುದಾರರ ಪರ ವಕೀಲರಿಗೆ ಪ್ರಶ್ನೆ ಮಾಡಿದರು. ಈ ವೇಳೆ ಮಧ್ಯಪ್ರದೇಶದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಿಎಂ ವಿರುದ್ಧ ಆರೋಪಿಸುವುದಕ್ಕೆ ಏನು ಇಲ್ಲ.. ಹೀಗಾಗಿ ಸಿಎಂ ವಿರುದ್ಧ ಆರೋಪಗಳಿಲ್ಲವೆಂದು ಪ್ರತಿಕ್ರಿಯಿಸಿದರು. ನಂತರ ಮುಖ್ಯಮಂತ್ರಿಗಳ ಪಾತ್ರ, ಕ್ಯಾಬಿನೆಟ್ ನಿರ್ಣಯದ ಬಗ್ಗೆ ವಾದ ಮಂಡಿಸುತ್ತೇನೆ. ಕೆಲ ಸಂದರ್ಭಗಳಲ್ಲಿ ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡುವ ಅರ್ಹತೆ ಕಳೆದುಕೊಳ್ಳುತ್ತದೆ. ಆರ್.ಎಸ್.ನಾಯಕ್ ಪ್ರಕರಣ ಉಲ್ಲೇಖಿಸಿ ಪ್ರಭುಲಿಂಗ್ ನಾವದಗಿ ವಾದ ಶುರು ಮಾಡಿದರು. ಸಿಎಂ ಸಿದ್ದರಾಮಯ್ಯರನ್ನು ರಕ್ಷಣೆ ಮಾಡುವ ಸಲುವಾಗಿಯೇ ಕ್ಯಾಬಿನೆಟ್‌ ನಿರ್ಣಯವನ್ನು ಮಾಡಲಾಗಿದೆ. ಇಂತಹ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸುವ ಅಗತ್ಯವಿಲ್ಲ ಎಂದು ವಾದಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist