ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!

Twitter
Facebook
LinkedIn
WhatsApp
ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!

ಬೆಂಗಳೂರು, ಮೇ 04: ಕೊರೊನಾ (Covid) ಸಂದರ್ಭದಲ್ಲಿ ಕೋವಿಶೀಲ್ಡ್ (Covishield)​ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಸುಳ್ಳು ಸುದ್ದಿ

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ