ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದ ತಾಯಿ

Twitter
Facebook
LinkedIn
WhatsApp
ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದ ತಾಯಿ!

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ಇಬ್ಬರು ಮಕ್ಕಳನ್ನು ನೀರಿನ ಗುಂಡಿಯಲ್ಲಿ ಎಸೆದು ಕೊಲೆ ಮಾಡಿದ ಘಟನೆ ಸೇಡಂ ತಾಲ್ಲೂಕಿನ ಗೋಪಾನಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನಿತಾ ಗಂಡ ಬಸಪ್ಪ ಪೂಜಾರಿ (28) ಎಂಬುವರೆ ಇಬ್ಬರು ಮಕ್ಕಳಾದ ಮೋನಿಕಾ (6) ಮತ್ತು ಸಿದ್ದಲಿಂಗ (4) ಅವರನ್ನು ನೀರಿನ ಗುಂಡಿಗೆ ಎಸೆದು ಕೊಲೆ ಮಾಡಿದವರು.

ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಮಕ್ಕಳನ್ನು ಸಾಯಿಸಿ ತಾಯಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಗ್ರಾಮಸ್ಥರು ಆಕೆಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೇಡಂ ತಾಲ್ಲೂಕಿನ ಗೋಪಾನಪಲ್ಲಿ ಗ್ರಾಮದ ಬಸಪ್ಪ ಪೂಜಾರಿ ಮತ್ತು ಗುರುಮಠಕಲ್‌ ತಾಲ್ಲೂಕಿನ ಗಾಜರಕೋಟ ಸಮೀಪದ ಶಿವಪುರ ಗ್ರಾಮದ ಅನಿತಾ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದು, ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. 

ಕಳದೆ ಮೂರು ದಿನಗಳ ಹಿಂದೆಯೂ ಜಗಳ ನಡೆದು ಮಾತು ಬಿಟ್ಟಿದ್ದರು. ಇದರಿಂದ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳನ್ನು ನೀರಿನ ಗುಂಡಿಗೆ ಎಸೆದು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಳು ಎಂದು ತಿಳಿದುಬಂದಿದೆ.ಸುದ್ದಿ ತಿಳಿದು ಮುಧೋಳ ಪೊಲೀಸ್‌ ಠಾಣೆಯ ಪಿ.ಐ.ಸಂದೀಪ್‌ ಮುರುಗನ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅನಿತಾ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಮುಧೋಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತೆ ಜೊತೆ ಅಳಿಯನ ಲವ್ವಿಡವ್ವಿ: ಸಂಸಾರ ಬಿಟ್ಟು ಬರಲ್ಲ ಎಂದಿದ್ದಕ್ಕೆ ಕೊಂದೇಬಿಟ್ಟ

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದ ತಾಯಿ!

ರಾಮನಗರ : ಪ್ರೀತ್ಸೆ ಅಂತ ಹಿಂದೆಬಿದ್ದಿದ ಅಳಿಯನ ಜೊತೆಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಹಿಳೆಯೊಬ್ಬರ ಕೊಲೆ ಪ್ರಕರಣವನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ಚನ್ನಪಟ್ಟಣ ಟೌನ್ ಜನರನ್ನು ಬೆಚ್ಚಿಬೀಳಿಸಿದ್ದ ಪ್ರಕರಣದಲ್ಲಿ ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಮಾವನ ಹೆಂಡತಿ ಜೊತೆಗೆ ಲವ್ವಿಡವ್ವಿ ಶುರುಮಾಡಿದ್ದ ಅಳಿಯ ಆಕೆಯ ಕುತ್ತಿಗೆ ಸೀಳಲು ಮಾಡಿದ್ದ ಮಾಸ್ಟರ್ ಪ್ಲ್ಯಾನ್ ಜೊತೆಗೆ ಆತ ಕೊಲೆ ಮಾಡಲು ಪಡೆದಿದ್ದ ತರಬೇತಿ ಕತೆ ಕೂಡ ರಣರೋಚಕವಾಗಿದೆ.

ಅಕ್ರಮ ಸಂಬಂಧಗಳಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ಅನೇಕರು ಕೊಲೆಯಾಗುವ ಪ್ರಕರಣ ಆಗಾಗ ಬೆಳಕಿಗೆ ಬರುತ್ತಲೇ ಇವೆ. ಇಂತಹ ಪ್ರಕರಣ ಪೈಕಿ ಕಳೆದ ಜುಲೈ 15ನೇ ತಾರೀಖು ಚನ್ನಪಟ್ಟಣ ಟೌನ್ ಮಹದೇಶ್ವರ ಬಡವಾಣೆಯ ಕೆ ಹೆಚ್ ಬಿ ಕಾಲೋನಿಯಲ್ಲಿ 34 ವರ್ಷದ ಗೀತಾ ಎಂಬ ಮಹಿಳೆಯೊಬ್ಬರು ರಕ್ತಸಿಕ್ತವಾಗಿ ಮನೆಯಲ್ಲಿ ಕೊಲೆಯಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. 

ಸದ್ಯ ಕೊಲೆ ಆರೋಪಿಯನ್ನು ಬಂಧಿಸಿರುವ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಹಿಂದಿನ ರಹಸ್ಯ ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು 24 ವರ್ಷದ ಅಜಯ್ ಎಂದು ಗುರುತಿಸಲಾಗಿದೆ.  ಮೃತ ಮಹಿಳೆ ತನ್ನ ಗಂಡನ ಅಕ್ಕನ ಮಗ ಅಜಯ್ ನೊಂದಿಗೆ ಅಕ್ರಮವಾಗಿ  ಇಟ್ಟುಕೊಂಡಿದ್ದ ಸಂಬಂಧವೇ ಕೊಲೆಗೆ ನಿಜವಾದ ಕಾರಣ ಅನ್ನೋದು ತಿಳಿದು ಬಂದಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂತೋಷ್ ಬಾಬು ಸ್ಪಷ್ಟನೆ ನೀಡಿದ್ದಾರೆ.

ಕೊಲೆಗೂ ಮೊದಲೇ ಕ್ರೈಂ ಎಪಿಸೋಡ್ ಗಳನ್ನ ನೋಡಿ ಪ್ರೇರಿತನಾಗಿ ಸಿನಿಮಾ ಸ್ಟೈಲ್ ನಲ್ಲಿ ಕೊಲೆ ಮಾಡಿ ಎಸ್ಕೇಪ್ ಆಗುವ ಪ್ಲ್ಯಾನ್ ಸಹ ಮಾಡಿದ್ದ. ಅದಕ್ಕಾಗಿಯೇ ಆನ್ಲೈನ್ ಒಂದರಲ್ಲಿ ಚಾಕು ಬುಕ್ ಮಾಡಿದ್ದ. ಬಳಿಕ ಎಂದಿನಂತೆ ಗೀತಾ ಮನೆಗೆ ಹೋಗುತ್ತಿದ್ದ ಅಜಯ್ ಅವತ್ತು ಕೊಲೆ ಮಾಡುವ ಸಂಚು ಹಾಕಿಕೊಂಡೆ ಹೋಗಿ ಮನೆಯ ರೂಮ್ ಒಂದರಲ್ಲಿ ಚಾಕುವಿನಿಂದ ಕತ್ತುಕೊಯ್ದು ಆಕೆಯ ಮೊಬೈಲ್ ಪಡೆದು ಎಸ್ಕೇಪ್ ಆಗಿದ್ದಾನೆ. ಬೆರಳಚ್ಚು ಸಿಗಬಾರದೆಂದು ಹ್ಯಾಂಡ್ ಗ್ಲೌವ್ಸ್ ಹಾಕೊಂಡು ಕತ್ತು ಸೀಳಿದ್ದಾನೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist