ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

Twitter
Facebook
LinkedIn
WhatsApp
ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಅವರು ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ವಿರುದ್ಧ ಭೋಜಪುರಿ ನಟಿ ಸಪ್ನಾ ಗಿಲ್‌ ನೀಡಿರುವ ಕ್ರಿಮಿನಲ್‌ ದೂರನ್ನು ಮುಂಬೈನ ಅಂಧೇರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.

ಲೈಂಗಿಕ ಕಿರುಕುಳ, ಹಲ್ಲೆ ಸೇರಿದಂತೆ ಹಲವು ಆರೋಪಗಳನ್ನು ಸಪ್ನಾ ಮಾಡಿದ್ದಾರೆ. ಹಾಗೆಯೇ ಕ್ರಿಕೆಟಿಗನ ವಿರುದ್ಧ ಎಫ್ಐಆರ್‌ ದಾಖಲಿಸಲು ಸಹಕರಿಸದ ಪೊಲೀಸ್‌ ಅಧಿಕಾರಿಗಳಾದ ಸತೀಶ್‌ ಕವಂಕರ್‌, ಭಾಗವತ್‌ ಗರಾಂಡೆ ವಿರುದ್ಧವೂ ಕ್ರಿಮಿನಲ್‌ ದೂರನ್ನು ದಾಖಲಿಸಲಾಗಿದೆ. ಏ.17ರಂದು ಇದರ ವಿಚಾರಣೆ ನಡೆಯಲಿದೆ. ಫೆ.15ರಂದು ಮುಂಬೈನ ದೇಶೀಯ ವಿಮಾನ ನಿಲ್ದಾಣದ ಸಮೀಪದ ಪಂಚತಾರಾ ಹೋಟೆಲೊಂದರಲ್ಲಿ ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ಮೇಲೆ ಹಲ್ಲೆಯಾಗಿತ್ತು.

ಭೋಜಪುರಿ ನಟಿ ಸಪ್ನಾ ಗಿಲ್‌ ಮತ್ತವರ ಗೆಳೆಯರು ಸೆಲ್ಫಿ ಕೇಳಿ ಗಲಾಟೆಯೆಬ್ಬಿಸಿದರು. ಬೇಸ್‌ಬಾಲ್‌ ಬ್ಯಾಟ್‌ನಲ್ಲಿ ಹಲ್ಲೆ ಮಾಡಿದರು ಎಂದು ದೂರು ಸಲ್ಲಿಸಲಾಗಿತ್ತು. ಫೆ.16ರಂದು ಸಪ್ನಾ ಗಿಲ್‌ರನ್ನು ಬಂಧಿಸಲಾಗಿತ್ತು. ಆಮೇಲೆ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಅವರೇ ಪೃಥ್ವಿ ಶಾರನ್ನು ತಪ್ಪಿತಸ್ಥ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪೃಥ್ವಿ ಶಾ ಪ್ರಸ್ತುತ ಐಪಿಎಲ್ 16 ನೇ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್‌ನಲ್ಲಿ ಪೃಥ್ವಿ ಶಾ ಫಾರ್ಮ್ ಉತ್ತಮವಾಗಿಲ್ಲ. ಇದುವರೆಗೆ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿದ್ದರೂ ಒಂದು ಪಂದ್ಯದಲ್ಲೂ ವಿಶೇಷತೆ ತೋರಲು ಸಾಧ್ಯವಾಗಿಲ್ಲ. ಹೀಗಾಗಿ ಪೃಥ್ವಿ ಶಾಗೆ ಮೈದಾನದ ಒಳಗೆ ಹಾಗೂ ಹೊರಗೆ ಕೆಟ್ಟ ವಾತಾವರಣ ನಿರ್ಮಾಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ