ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ರಿಕೆಟಿಗ ಶುಭಮನ್ ಗಿಲ್ ಸಹೋದರಿಗೆ ನಿಂದನೆ: ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ನೋಟಿಸ್

Twitter
Facebook
LinkedIn
WhatsApp
images 1

ನವದೆಹಲಿ: ಆನ್ ಲೈನ್ ನಲ್ಲಿ ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಗೆ ನಿಂದನೆ, ಅತ್ಯಾಚಾರ , ಹಲ್ಲೆ ಬೆದರಿಕೆ ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮಹಿಳಾ ಆಯೋಗವು  ಪೊಲೀಸರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಐಪಿಎಲ್‌ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ  ಗುಜರಾತ್ ಟೈಟನ್ಸ್ ಪರ  ಗಿಲ್ ಭರ್ಜರಿ ಶತಕ ಸಿಡಿಸಿದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಾವಳಿಯಿಂದ ಹೊರಬಿದ್ದಿತ್ತು. 

ಪಂದ್ಯದ ನಂತರ, ಗಿಲ್ ಮತ್ತು ಅವರ ಸಹೋದರಿಯನ್ನು ಕೆಲವರು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲಿಂಗ್ ಮತ್ತು ನಿಂದನೆ ಮಾಡಿದ್ದರು. ಶುಭ್ ಮನ್ ಗಿಲ್ ಅವರ ಸಹೋದರಿಗೆ ಟ್ವಿಟರ್, ಇನ್ಸ್ಟಾಗ್ರಾಮ್ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ, ಮಹಿಳಾ ದ್ವೇಷ, ಬೆದರಿಕೆ ಅತ್ಯಂತ ನಿಂದನೀಯ ಫೋಸ್ಟ್ ಹಾಕಿರುವುದು ಸಂಪೂರ್ಣ ಅಪರಾಧ ಕೃತ್ಯವಾಗಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತು ಕ್ರಮ ಕೈಗೊಳ್ಳುವಂತಹದ್ದು ಎಂದು ದೆಹಲಿ ಮಹಿಳಾ ಆಯೋಗ ನೋಟಿಸ್ ನಲ್ಲಿ ಹೇಳಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವಿಟರ್ ನಲ್ಲಿ ನೋಟಿಸ್ ಹಂಚಿಕೊಂಡಿದ್ದು, ಮೇ 26ರೊಳಗೆ ಕೈಗೊಂಡ ಕ್ರಮದ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ