ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!

Twitter
Facebook
LinkedIn
WhatsApp
ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!

IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ RCB ತಂಡದ ನಾಯಕ ಫಾಫ್ ಡುಪ್ಲೆಸಿಸ್ (Faf du plessis) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಶಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಯಿತು. 148 ರನ್​ಗಳ ಗುರಿ ಬೆನ್ನತ್ತಿದ ಅರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಯಿತು. 148 ರನ್​ಗಳ ಗುರಿ ಬೆನ್ನತ್ತಿದ ಅರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ವಿಶೇಷ ಎಂದರೆ ಈ 64 ರನ್​ಗಳನ್ನು ಫಾಫ್ ಡುಪ್ಲೆಸಿಸ್ ಮೊದಲ 6 ಓವರ್​ಗಳಲ್ಲೇ ಕಲೆಹಾಕಿದ್ದರು. ಈ ಮೂಲಕ ಆರ್​ಸಿಬಿ ಪರ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ರೆಕಾರ್ಡ್ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2012 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೇಲ್ ಪವರ್​ಪ್ಲೇನಲ್ಲಿ 50 ರನ್ ಸಿಡಿಸಿ ಈ ದಾಖಲೆ ಬರೆದಿದ್ದರು.

ಇದೀಗ 64 ರನ್​ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಫಾಫ್ ಡುಪ್ಲೆಸಿಸ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಪವರ್​ಪ್ಲೇನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ