ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‌ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‌ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು (ಫೆ.04): ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‌ಗೆ ಬಂದು ಫ್ಯಾನ್‌ಗೆ ನೇಣು ಹಾಕಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ‌ಲಿಂಗಸೂಗೂರು ಪಟ್ಟಣದ ವಿಸಿಬಿ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ. ಐಶ್ವರ್ಯ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡಾದ ವಿದ್ಯಾರ್ಥಿನಿ ಐಶ್ವರ್ಯ ವಿಸಿಬಿ ಕಾಲೇಜಿನ ಫಸ್ಟ್ ಪಿಯು ಸೈನ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಳು.

ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಲಿಂಗಸೂಗೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಿಂಗಸಗೂರಿನ ವಿಶ್ವೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡ್ತಿದ್ದ ಐಶ್ವರ್ಯ ಆತ್ಮಹತ್ಯೆಗೆ ಪ್ರಾಂಶುಪಾಲರೇ ಕಾರಣ ಅಂತಾ ವಿದ್ಯಾರ್ಥಿನಿ ಪೋಷಕರು ಆರೋಪ ಮಾಡಿದ್ದು, ವಿದ್ಯಾರ್ಥಿನಿ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ರೂ ಇದುವರೆಗೂ ಮೃತದೇಹ ತೆಗೆಯಲು ಪೋಷಕರು ಬಿಡದೆ ವಸತಿ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಪ್ರಾಂಶುಪಾಲರು ಬರೋ ತನಕ ಮೃತದೇಹ ತೆಗೆಯಲು ಬಿಡಲ್ಲ ಎಂದು ಪೋಷಕರು ಹಾಗೂ ಸಂಬಂಧಿಕರು ರಾತ್ರಿಯ ತನಕ ಪಟ್ಟು ಹಿಡಿದಿದ್ದಾರೆ. ಇದುವರೆಗೂ ಮೃತ ವಿದ್ಯಾರ್ಥಿನಿ ಪೋಷಕರು ದೂರು ಕೂಡ ದಾಖಲಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ