ಟೋಕಿಯೊ: ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟೋಕಿಯೊದಲ್ಲಿ ಇಂದು ಎರಡನೇ ಬಾರಿಗೆ ಮಾತುಕತೆ ನಡೆಸಿದರು. ಕ್ವಾಡ್ ಸಮಾವೇಶದಲ್ಲಿ (Quad Summit) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದಸ್ಯ ರಾಷ್ಟ್ರಗಳು ಪರಸ್ಪರ ನಂಬಿಕೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಪ್ರಜಾಪ್ರಭುತ್ವಕ್ಕೆ ಹೊಸ ಬಲ ಸಿಗುತ್ತದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಮತ್ತು ಆಸ್ಟ್ರೇಲಿಯಾದ ನೂತನ ಪ್ರಧಾನಿ ಅಂತೋನಿ ಅಲ್ಬೆನೀಸ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಕೊವಿಡ್-19ರ ಕಾರಣದಿಂದ ಉಂಟಾದ ಹಲವು ಸಂಕಷ್ಟಗಳ ನಡುವೆಯೂ ಸದಸ್ಯ ರಾಷ್ಟ್ರಗಳು ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೆಚ್ಚಿಸಿದವು. ಲಸಿಕೆಗಳ ವಿತರಣೆ, ಹವಾಮಾನ ವೈಪರಿತ್ಯದ ಪರಿಣಾಮ ಕಡಿಮೆ ಮಾಡುವುದು, ಪೂರೈಕೆ ಸರಪಳಿಯನ್ನು ಸುಸ್ಥಿರವಾಗಿ ಕಾಪಾಡುವುದು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸದಸ್ಯ ರಾಷ್ಟ್ರಗಳು ಗಮನಾರ್ಹ ಕೊಡುಗೆ ನೀಡಿದವು. ಈ ಉಪಕ್ರಮಗಳು ಇಂಡೊ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನೆರವಾದವು ಎಂದು ಮೋದಿ ಹೇಳಿದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?