ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನಲ್ಲ- PhD ವಿದ್ಯಾರ್ಥಿ ಆತ್ಮಹತ್ಯೆ

Twitter
Facebook
LinkedIn
WhatsApp
960x0

ನವದೆಹಲಿ: ಮದ್ರಾಸ್‍ (Madras) ನಲ್ಲಿರುವ ಇಂಡಿಯನ್ ಇನ್ಸ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪಿಹೆಚ್‍ಡಿ (PhD) ಓದುತ್ತಿರುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದು, ಇದು ಈ ವರ್ಷದಲ್ಲಿ ನಡೆದ ಮೂರನೇ ಘಟನೆಯಾಗಿದೆ.

ಮೃತನನ್ನು ಸಚಿನ್ (32) ಎಂದು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳ ಮೂಲದವನಾಗಿದ್ದಾನೆ. ಈತ ಮದ್ರಾಸ್ ಐಐಟಿನಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೂ ಕೆಲ ಗಂಟೆಗಳ ಹಿಂದೆ ವಿದ್ಯಾರ್ಥಿ ವಾಟ್ಸಪ್ ಸ್ಟೇಟಸ್ (Whatsapp Status) ಹಾಕಿದ್ದಾನೆ. ಅದರಲ್ಲಿ ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನು ಅಲ್ಲ ಎಂದು ಬರೆದುಕೊಂಡಿದ್ದಾನೆ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿ ಈ ರೀತಿ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದನ್ನು ನೋಡಿದ ಓರ್ವ ಗೆಳೆಯ, ಕೂಡಲೇ ಆತನ ಮನೆಗೆ ಓಡಿದ್ದಾನೆ. ಆದರೆ ಅದಾಗಲೇ ವಿದ್ಯಾರ್ಥಿ ಕುಣಿಕೆಗೆ ಕೊರಳೊಡ್ಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆತ ಅಂಬುಲೆನ್ಸ್ ಗೆ ಕರೆ ಮಾಡಿದ್ದು, ಆದರೆ ಅದಾಗಲೇ ಸಚಿನ್ ಮೃತಪಟ್ಟಿದ್ದನು.

ಸಚಿನ್ ಮೃತದೇಹವನ್ನು ರೊಯಪೇಟೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವರ್ಷದಲ್ಲಿ ಇದು ಮೂರನೇ ಪ್ರಕರಣವಾಗಿದ್ದು, 2018ರಿಂದ ಇದುವರೆಗೆ ಒಟ್ಟು 11 ಮಂದಿ ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ