ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಶಾಲಾ ಮಕ್ಕಳ ಪಠ್ಯಪುಸ್ತಕ ಶೇ.25ರಷ್ಟು ದುಬಾರಿ: ಬೆಲೆ ಏರಿಕೆ, ಜಿಎಸ್‌ಟಿ ಕಾರಣ

Twitter
Facebook
LinkedIn
WhatsApp
file7l4sqaqjm8xb72hjmp1653419477

ಬೆಂಗಳೂರು (ಮಾ.17): ರಾಜ್ಯ ಪಠ್ಯಕ್ರಮ ಬೋಧಿಸುವ ಖಾಸಗಿ ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿನ ಮಕ್ಕಳಿಗೆ ಸರ್ಕಾರವೇ ಪೂರೈಸುವ ಪಠ್ಯಪುಸ್ತಕಗಳ ಬೆಲೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶೇ.25ರಷ್ಟು ಏರಿಕೆಯಾಗಲಿದೆ. ಇದರಿಂದ ಸುಮಾರು 19 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಖಾಸಗಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿನ ಸುಮಾರು 52 ಲಕ್ಷ ವಿದ್ಯಾರ್ಥಿಗಳ ಪೋಷಕರಿಗೆ ಹೊರೆಯಾಗಲಿದೆ.

ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಪುಸ್ತಕಗಳನ್ನು ಪ್ರತಿ ವರ್ಷ ಅಗತ್ಯಕ್ಕನುಗುಣವಾಗಿ ಮುದ್ರಿಸಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಪೂರೈಸುತ್ತದೆ. ಆದರೆ, ಸರ್ಕಾರಿ ಮತ್ತು ಅನುದಾನಿತ ಶಾಲೆ, ಕಾಲೇಜುಗಳಿಗೆ ಉಚಿತವಾಗಿ ಪಠ್ಯಪುಸ್ತಕ ಪೂರೈಸಿದರೆ, ಖಾಸಗಿ ಶಾಲೆ, ಕಾಲೇಜುಗಳು 1ರಿಂದ 12ನೇ ತರಗತಿನ ತಮ್ಮ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಸರ್ಕಾರಕ್ಕೆ ಶೇ.10ರಷ್ಟು ಮುಂಗಡ ಹಣ ಪಾವತಿಸಿ ಇಂಡೆಟ್‌ (ಬೇಡಿಕೆ) ಸಲ್ಲಿಸಬೇಕು. ಇದರ ಆಧಾರದ ಮೇಲೆ ಶಿಕ್ಷಣ ಇಲಾಖೆಯು ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (ಕೆಟಿಬಿಎಸ್‌) ಮೂಲಕ ಬೇಡಿಕೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಮುದ್ರಿಸಿ ಪೂರೈಕೆ ಮಾಡಲಿದೆ.

2023-24ನೇ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸಿರುವ ಶಾಲೆಗಳ ಮುಖ್ಯಸ್ಥರು ಹೇಳುವ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಪಠ್ಯಪುಸ್ತಕಗಳ ಬೆಲೆ ಶೇ.20ರಿಂದ 25ರಷ್ಟು ಹೆಚ್ಚಿಸಲಾಗಿದೆ. ಕಳೆದ ಸಾಲಿನಲ್ಲಿ 46 ರು. ಇದ್ದ ಗಣಿತ ಭಾಗ 2 ಪುಸ್ತಕದ ಮಾರಾಟ ಬೆಲೆ ಈಗ 60 ರು.ಗೆ, 45 ರು. ಇದ್ದ ಗಣಿತ ಭಾಗ 1 ಬೆಲೆ 58 ರು.ಗೆ, 34 ರು. ಇದ್ದ ವಿಜ್ಞಾನ ಭಾಗ 2 ಬೆಲೆ 44 ರು.ಗೆ ಏರಿಕೆಯಾಗಿದೆ. ಸಮಾಜ ವಿಜ್ಞಾನ ಭಾಗ 1 ಮತ್ತು ಇಂಗ್ಲಿಷ್‌ ಪುಸ್ತಕಗಳ ಬೆಲೆಯಲ್ಲಿ 11 ರು., ವಿಜ್ಞಾನ ಭಾಗ 2 ಬೆಲೆ 10 ರು. ಹೆಚ್ಚಾಗಿದೆ. ಹೀಗೆ ಬಹುತೇಕ ಎಲ್ಲ ಪುಸಕ್ತಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಇದರ ಹೊರೆ ಪೋಷಕರಿಗೆ ಬೇಳಲಿದೆ ಎನ್ನುತ್ತಾರೆ ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌.

ಬೆಲೆ ಏರಿಕೆ, ಜಿಎಸ್‌ಟಿ ಕಾರಣ: ಕೋವಿಡ್‌ ಹಾಗೂ ರಷ್ಯಾ-ಉಕ್ರೇನ್‌ ಯುದ್ಧದ ಕಾರಣದಿಂದ ಕಾಗದದ ಬೆಲೆ ಹೆಚ್ಚಳವಾಗಿರುವುದರಿಂದ ಪಠ್ಯಪುಸ್ತಕದ ಬೆಲೆಯನ್ನು ಹೆಚ್ಚಿಸಲಾಗಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು. ಕಾಗದದ ಬೆಲೆ, ಮುದ್ರಣದ ವೆಚ್ಚಗಳಿಗೆ ಅನುಗುಣವಾಗಿ ಪ್ರತಿ ವರ್ಷ ಪಠ್ಯಪುಸ್ತಕದ ಬೆಲೆ ಹೆಚ್ಚಳಕ್ಕೆ ಅವಕಾಶವಿದೆ. ಅದೇ ರೀತಿ ಈ ವರ್ಷವೂ ಮಾಡಲಾಗಿದೆ. ಇದು ಹೊಸದೇನಲ್ಲ. ಆದರೆ, ಹಿಂದಿನ ವರ್ಷಗಳಿಗಿಂತ ಈ ಬಾರಿ ಕಾಗದದ ಬೆಲೆ ಶೇ.65ರಷ್ಟುಏರಿಕೆಯಾಗಿದೆ. ಅಲ್ಲದೆ ಮೂರು ವರ್ಷಗಳ ಹಿಂದೆ ಶೇ.3ರಷ್ಟಿದ್ದ ಜಿಎಸ್‌ಟಿ ನಂತರ ಶೇ.12ಕ್ಕೆ ಈಗ ಶೇ.18ಕ್ಕೆ ಏರಿಕೆಯಾಗಿದೆ. ಕೆಲವು ಸಮಯದಲ್ಲಿ ಹಣ ಕೊಟ್ಟರೂ ಕಾಗದದ ಕೊರತೆ ಅನುಭವಿಸಿದ್ದೂ ಇದೆ. ಈ ಎಲ್ಲ ಕಾರಣಗಳಿಂದ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಇಲಾಖೆಯ ಉನ್ನತ ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ