ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಕ್ರಿಕೆಟಿಗರ ವಿರುದ್ಧ ಕೇಳಿಬಂತು ಲೈಂಗಿಕ ದೌರ್ಜನ್ಯದ ಆರೋಪ

Twitter
Facebook
LinkedIn
WhatsApp
ಖ್ಯಾತ ಕ್ರಿಕೆಟಿಗರ ವಿರುದ್ಧ ಕೇಳಿಬಂತು ಲೈಂಗಿಕ ದೌರ್ಜನ್ಯದ ಆರೋಪ

ಭಾರತ ಕ್ರಿಕೆಟ್‌ ತಂಡ ಖ್ಯಾತ ಆಟಗಾರ ಹಾರ್ದಿಕ್‌ ಪಾಂಡ್ಯ, ಮುನಾಫ್‌ ಪಟೇಲ್‌ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ರಾಜೀಶ್‌ ಶುಕ್ಲ ವಿರುದ್ದ ಇದೀಗ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ಈ ಕುರಿತು ರೆಹನುಮಾ ಭಾಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಾಯಕನಾಗಿರುವ ರಿಯಾಜ್ ಭಾಟಿ ಪತ್ನಿರೆಹನುಮಾ ಭಾಟಿ (Rehnuma Bhati) ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ತನ್ನ ಪತಿ ಅತ್ಯಾಚಾರ ಮತ್ತು ಹೈ ಪ್ರೊಫೈಲ್ ಸೆಕ್ಸ್ ರಾಕೆಟ್ ನಡೆಸುತ್ತಿದ್ದಾರೆ. ತನ್ನ ಪತಿ ರಿಯಾಜ್ ಭಾಟಿ ತನ್ನ ವ್ಯವಹಾರಕ್ಕಾಗಿ ಉನ್ನತ ವ್ಯಕ್ತಿಗಳ ಜೊತೆಗೆ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆ ನೀಡಿರುವ ದೂರಿನಲ್ಲಿ ಖ್ಯಾತ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಮುನಾಫ್ ಪಟೇಲ್, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ವಿರುದ್ದ ಗಂಭೀರವಾದ ಆರೋಪ ಮಾಡಿದ್ದು, ದೂರಿನಲ್ಲಿ ಈ ಮೂವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆದರೆ ತನ್ನ ಮೇಲೆ ಅತ್ಯಾಚಾರ ನಡೆದಿರುವ ಪ್ರದೇಶ ಹಾಗೂ ಸಮಯದ ಕುರಿತು ರೆಹನುಮಾ ಭಾಟಿ ಉಲ್ಲೇಖ ಮಾಡಿಲ್ಲ. ಮಾಧ್ಯಮದವರೊಂದಿಗೆ ಮಾತನಾಡುವ ವೇಳೆಯಲ್ಲಿಯೂ ಕೂಡ ಈ ಮೂವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಮುಂಬೈ ಪೊಲೀಸರಿಗೆ ಅವರು ಸಲ್ಲಿಸಿದ ಅರ್ಜಿಯಲ್ಲಿ ಪೃಥ್ವಿರಾಜ್ ಕೊಠಾರಿಗೆ ಯಾವುದೇ ವಿವರಣೆಯನ್ನು ನಮೂದಿಸಿಲ್ಲವಾದರೂ, ದಿ ಪ್ರಿಂಟ್‌ನೊಂದಿಗೆ ಮಾತನಾಡುವಾಗ ರೆಹಮುನಾ ಅವರು ಅರ್ಜಿಯಲ್ಲಿ ಅವರನ್ನು ಉಲ್ಲೇಖಿಸುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ನಾನು ಸಪ್ಟೆಂಬರ್‌ ತಿಂಗಳಿನಲ್ಲಿಯೇ ದೂರು ನೀಡಿದ್ದೇನೆ. ಇದೀಗ ನವೆಂಬರ್‌ ತಿಂಗಳು ಕಳೆದಿದೆ. ಆದರೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಲ್ಲ. ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಹಣ ಬೇಡಿಕೆಯಿಟ್ಟಿದ್ದಾರೆ ಎಂದು ಕೂಡ ರೆಹನುಮಾ ಭಾಟಿ ಆರೋಪ ಮಾಡಿರುವ ಕುರಿತು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ರಿಯಾಜ್ ಭಾಟಿ ಅವರ ಪತ್ನಿ ಸಲ್ಲಿಸಿದ ದೂರಿನ ಪ್ರತಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರಾದ ಸಮೀತ್ ಠಕ್ಕರ್ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 24, 2021 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಎಫ್‌ಐಆರ್ ಚಿತ್ರ ಮತ್ತು ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು