ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

Twitter
Facebook
LinkedIn
WhatsApp
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

ಮಂಡ್ಯ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮದ್ದೂರಿನ ಹೊಳೆಬೀದಿಯಲ್ಲಿ ವಾಸವಿದ್ದ ಉಸ್ನಾ ಕೌಸರ್ (30) ತನ್ನ ಮೂರು ಮಕ್ಕಳಿಗೆ ವಿಷ ಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾರಿಸ್ (7), ಆಲಿಸಾ (4) ಅನಮ್ ಫಾತಿಮಾ (2) ಎಂಬ ಮೂರು ಮಕ್ಕಳು ಮೃತರಾಗಿದ್ದಾರೆ.

ಉಸ್ನಾ ಕೌಸರ್‌ ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಖಿಲ್ ಅಹಮದ್ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇದಕ್ಕೆ ಪೂರಕ ಎಂಬಂತೆ ಅಖಿಲ್ ಮೊಬೈಲ್‌ನಲ್ಲಿ ಕೌಸರ್‌ಗೆ ಪರ ಸ್ತ್ರೀಯ ಬೆತ್ತಲೆ ಫೋಟೋ ಹಾಗೂ ಆಕೆಯ ಜೊತೆ ಅಖಿಲ್ ಅಹಮದ್ ಇದ್ದ ಫೋಟೋಗಳು ಪತ್ತೆಯಾಗಿವೆ.

ಇದನ್ನು ಪ್ರಶ್ನೆ ಮಾಡಿದ್ದ ಕೌಸರ್, ಇದೇ ವಿಚಾರಕ್ಕೆ ಮನೆಯಲ್ಲಿ ಜೋರು ಗಲಾಟೆಯೂ‌ ಸಹ ನಡೆದಿದೆ. ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದು, ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಹೇಳಿದ್ದ. ನಿನ್ನೆ ಉರುಫ್ ಹಿನ್ನೆಲೆ ಕೆಲಸ ಮುಗಿಸಿ ಬೇಗಾ ಮನೆಗೆ ಬರ್ತೀನಿ ಎಂದು ಕೆಲಸಕ್ಕೆ‌ ಅಖಿಲ್ ಹೋಗಿದ್ದ. ಸಂಜೆ ಆತ ಮನೆಗೆ ಬೇಗ ಬಾರದಿದ್ದಾಗ ಕಾಸರ್ ಫೋನ್ ಸಹ ಮಾಡಿದ್ದು, ಈ ವೇಳೆ ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಕಲಸಿ ತಿನ್ನಿಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನೂ ಈ ನಾಲ್ವರನ್ನು ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರು ಆರೋಪ ಮಾಡಿದ್ದು, ಸದ್ಯ ಅಖಿಲ್ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಸದ್ಯ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿದ್ದು, ಪ್ರಕರಣ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ