ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ

Twitter
Facebook
LinkedIn
WhatsApp
ಗಡಿ ವಿವಾದ ತಾರಕಕ್ಕೆ: ಒಂದಿಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಬಸ್ಸುಗಳಿಗೆ ಮರಾಠಿಯಲ್ಲಿ ಬರೆದು ಆಕ್ರೋಶ

ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿದ್ದಂತೆ, ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಗಡಿ ಭಾಗದಲ್ಲಿರುವ ಮರಾಠಿಗರಿಗೆ ನ್ಯಾಯ ಒದಗಿಸಲು ಸರ್ಕಾರ ಸಕಲ ಪ್ರಯತ್ನವನ್ನೂ ಮಾಡುತ್ತಿದೆ. ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯೂ ಬೇರೆಯವರ ಪಾಲಾಗಲು ನಾವು ಬಿಡುವುದಿಲ್ಲ. 40 ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

ಇದಕ್ಕೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೇಲೆ ಹರಿಹಾಯ್ದಿದ್ದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೊಮ್ಮಾಯಿಯವರಿಗೆ ಈಗೇನು ದೆವ್ವ ಹಿಡಿದಿದೆಯೇ, ಈಗ ಗಡಿ ವಿವಾದ ಬಗ್ಗೆ ಮಾತನಾಡುತ್ತಾರೆ. ಮಹಾರಾಷ್ಟ್ರದ 40 ಗ್ರಾಮಗಳು ಬೇಕೆಂದು ಈಗ ಹಠಾತ್ತಾಗಿ ಕೇಳುವ ಬೊಮ್ಮಾಯಿಯವರಿಗೆ ದೆವ್ವ ಹಿಡಿದಿದೆಯೇ ಎಂದು ಟೀಕಿಸಿದ್ದರು.

ಎನ್ ಸಿಪಿ ನಾಯಕ ಅಜಿತ್ ಪವಾರ್ ಕರ್ನಾಟಕಕ್ಕೆ ಸಿಎಂ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಸರಿಯಾದ ಉತ್ತರ ನೀಡಬೇಕೆಂದು ಹೇಳಿದ್ದಾರೆ. ಈ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಕೂಡ ಅಜಿತ್ ಪವಾರ್ ಒತ್ತಾಯಿಸಿದ್ದಾರೆ. 

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಗಡಿ ವಿವಾದ ಕುರಿತು ನೀಡುತ್ತಿರುವ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಜನರನ್ನು ಕೆರಳಿಸುವಂತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ದೇವೇಂದ್ರ ಫಡ್ನವೀಸ್ ಹೇಳಿಕೆ ಪ್ರಚೋದನಕಾರಿಯಾಗಿದೆ. ಗಡಿ ವಿವಾದದಲ್ಲಿ ನಮ್ಮ ಸರ್ಕಾರ ನೆಲ, ಜನ, ಗಡಿಭಾಗದ ರಕ್ಷಣೆಗೆ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು.

ನಿನ್ನೆ ಹೇಳಿಕೆ ನೀಡಿದ್ದ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಭಾಗದಲ್ಲಿರುವ ಯಾವುದೇ ಗ್ರಾಮಗಳು ಕರ್ನಾಟಕಕ್ಕೆ ಹೋಗಲು ಬಿಡುವುದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಬಲವಾಗಿ ಹೋರಾಡಲಿದ್ದು, ಬೆಳಗಾವಿ ಕಾರವಾರ ನಿಪ್ಪಾಣಿ ಭಾಗ ಸೇರಿದಂತೆ ಮರಾಠಿಗರು ಮಾತನಾಡುವ ಯಾವುದೇ ಗ್ರಾಮಗಳು ಕರ್ನಾಟಕ ಪಾಲಾಗಲು ಬಿಡುವುದಿಲ್ಲ ಎಂದಿದ್ದರು. 

ಸಿಎಂ ಬೊಮ್ಮಾಯಿ ಹೇಳಿಕೆ ವಿರುದ್ಧ ಪ್ರತಿಭಟನೆ: ಗಡಿ ವಿವಾದ ಕುರಿತು ಕರ್ನಾಟಕ ಸಿಎಂ ಬೊಮ್ಮಾಯಿ ನೀಡಿರುವ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿದ್ದು ಕರ್ನಾಟಕ ಬಸ್ಸಿಗೆ ಬಣ್ಣ ಬಳಿದು, ಮರಾಠಿಯಲ್ಲಿ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ