ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಡ್ ನ್ಯೂಸ್! ಇನ್ನು ಮುಂದೆ ಗರ್ಭಿಣಿ ಮಹಿಳೆಯರು ಕೋರೋಣ ಲಸಿಕೆ ತೆಗೆದುಕೊಳ್ಳಬಹುದು!!

Twitter
Facebook
LinkedIn
WhatsApp
ಗುಡ್ ನ್ಯೂಸ್! ಇನ್ನು ಮುಂದೆ ಗರ್ಭಿಣಿ ಮಹಿಳೆಯರು ಕೋರೋಣ ಲಸಿಕೆ ತೆಗೆದುಕೊಳ್ಳಬಹುದು!!

ನವದೆಹಲಿ:ಗರ್ಭಿಣಿಯರು ಈಗ ಕೋವಿಡ್ -19 ವ್ಯಾಕ್ಸಿನ್ ತೆಗೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಪ್ರಕಟಿಸಿದ್ದು ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ ನೇರವಾಗಿ ಹೋಗಿ (ಸಿವಿಸಿ) ಲಸಿಕೆ ಪಡೆಯಬಹುದು ಎಂದು ತಿಳಿಸಿದೆ.

ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್‌ಟಿಎಜಿಐ) ಶಿಫಾರಸುಗಳ ಆಧಾರದ ಮೇಲೆ ಕೇಂದ್ರ ಆರೋಗ್ಯ ಸಚಿವಾಲಯವು ಅನುಮೋದನೆ ನೀಡಿದೆ. ಗರ್ಭಿಣಿ ಮಹಿಳೆಯರು ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿಲ್ಲ, ಆಯ್ಕೆಯಾಗಿ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಪ್ರಸ್ತುತ ಈಗ ನಡೆಯುತ್ತಿರುವ ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದಡಿ ಇದನ್ನು ಕಾರ್ಯಗತಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ವ್ಯಾಕ್ಸಿನೇಷನ್ ಆಯ್ಕೆ ಮಾಡುವ ಗರ್ಭಿಣಿ ಮಹಿಳೆಯರಿಗೆ, ಗರ್ಭಾವಸ್ಥೆಯಲ್ಲಿ ಯಾವುದೇ ಸಮಯದಲ್ಲಿ ದೇಶದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಗಳನ್ನು ಕೋವಿನ್‌ನಲ್ಲಿ ನೋಂದಣಿ ಮಾಡಿದ ನಂತರ ಅಥವಾ ವಾಕ್-ಇನ್ ನೋಂದಣಿಯ ಮೂಲಕ ಹತ್ತಿರದ ಸರ್ಕಾರಿ ಅಥವಾ ಖಾಸಗಿ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಅವರಿಗೆ ಲಸಿಕೆ ನೀಡಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಲ್ಲಿಗೆ ಹೋಗಿ ಅವರು ಲಸಿಕೆಯನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದಡಿ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ಫಲಾನುಭವಿಗಳಿಗೆ ನೋಂದಣಿ, ವ್ಯಾಕ್ಸಿನೇಷನ್ ನಂತರ ಪ್ರಮಾಣಪತ್ರಗಳ ಉತ್ಪಾದನೆ ಮುಂತಾದ ಕಾರ್ಯವಿಧಾನಗಳು ಒಂದೇ ಆಗಿರುತ್ತವೆ ಎಂದು ಹೇಳಿದೆ.

ಕೆಲವು ದಿನಗಳ ಹಿಂದೆ, ಕೋವಿಡ್ -19 ಲಸಿಕೆಯ ಮೌಲ್ಯ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಗರ್ಭಿಣಿ ಮಹಿಳೆಯರಿಗೆ ಕೌನ್ಸೆಲಿಂಗ್ ಮಾಡುವ ಬಗ್ಗೆ ಮುಂಚೂಣಿ ಕೆಲಸಗಾರರು ಮತ್ತು ವ್ಯಾಕ್ಸಿನೇಟರ್‌ಗಳಿಗೆ ಮಾರ್ಗದರ್ಶನ ನೀಡಲು ಸಚಿವಾಲಯವು ಫ್ಯಾಕ್ಟ್‌ಶೀಟ್ ಸಿದ್ಧಪಡಿಸಿತ್ತು, ಇದರಿಂದ ಅವರು ತಿಳುವಳಿಕೆಯುಳ್ಳ ನಿರ್ಧಾರ ತೆಗೆದುಕೊಳ್ಳಬಹುದು. ಕೋವಿಡ್ ಲಸಿಕೆಗಳ ಅಡ್ಡಪರಿಣಾಮಗಳ ಮೇಲೆ, ಲಭ್ಯವಿರುವ ಲಸಿಕೆಗಳು ಸುರಕ್ಷಿತವಾಗಿದೆ ಮತ್ತು ವ್ಯಾಕ್ಸಿನೇಷನ್ ಗರ್ಭಿಣಿಯರನ್ನು ಇತರ ವ್ಯಕ್ತಿಗಳಂತೆ ಕೋವಿಡ್ -19 ಸೋಂಕಿನಿಂದ ರಕ್ಷಿಸುತ್ತದೆ ಎಂದು ಸರ್ಕಾರದ ಫ್ಯಾಕ್ಟ್‌ಶೀಟ್ ಹೇಳಿದೆ.
ಗರ್ಭಧಾರಣೆಯಿಂದ ಕೊರೋನಾ ಹೆಚ್ಚಾಗುವುದಿಲ್ಲ. ಅನೇಕ ಗರ್ಭಿಣಿಯರಿಗೆ ಸೋಂಕಿನ ಲಕ್ಷಣಗಳೇ ಇರುವುದಿಲ್ಲ. ಇದ್ದರೂ ಸೌಮ್ಯವಾಗಿರುತ್ತವೆ. ಆದರೆ ಬಳಿಕ ಆರೋಗ್ಯ ನಿಧಾನವಾಗಿ ಹದಗೆಡಲಾರಂಭಿಸುತ್ತದೆ ಹಾಗೂ ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕೊರೋನಾ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಹೀಗಾಗಿ ಕೊರೋನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು