ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುತ್ತಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ: ಏ.1ರಿಂದ ಜಾರಿ

Twitter
Facebook
LinkedIn
WhatsApp
Bengalurus Vidhana Soudha could be worth over Rs 3900 crores FB 1200x700 compressed

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್‌.ಶ್ರೀನಿವಾಸಾಚಾರಿ ಸಮಿತಿ ಶಿಫಾರಸಿನನ್ವಯ ಏಪ್ರಿಲ್ 1ರಿಂದ ಜಾರಿಯಾಗುವಂತೆ ವೇತನ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ. 15 ರಷ್ಟು ವೇತನ ಹೆಚ್ಚಳದ ಆದೇಶ ಹೊರಬೀಳಲಿದೆ. ಜೊತೆಗೆ ಇನ್ನು ಎರಡು ತಿಂಗಳಲ್ಲಿ ಅವರಿಗೆ ಕನಿಷ್ಠ ವೇತನ ಜಾರಿಗೊಳಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಇತ್ತೀಚೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಹೇಳಿದ್ದರು.

ನೌಕರರಿಗೆ ಕನಿಷ್ಠ ವೇತನ ನೀಡುವ ಪ್ರಕ್ರಿಯೆಯನ್ನೂ ಸರ್ಕಾರ ನಡೆಸಿದೆ. ಎಚ್​​ಎಚ್​ಎಂ ಯೋಜನೆ ಕ್ರೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ 50 ಅನುಪಾತದ ಅನುದಾನದಲ್ಲಿ ನಡೆಯುತ್ತಿರುವ ಯೋಜನೆಯಾಗಿದೆ. ಇಂತಹ ಯೋಜನೆಗಳು ಅಗತ್ಯ ಇರುವವರೆಗೆ ನಡೆಯುತ್ತದೆ. ಹಾಗಾಗಿ ಈ ನೌಕರರನ್ನು ಕಾಯಂ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ಬಿಬಿಎಂಪಿ ವ್ಯಾಪ್ತಿಯ 11,307 ಪೌರ ಕಾರ್ಮಿಕರ ನೇಮಕಾತಿಗಾಗಿ ರಾಜ್ಯ ಸರ್ಕಾರ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಭರ್ತಿಗಾಗಿ 11,307 ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಆರ್​. ಟಿ ನಗರದ ಸಿಎಂ ನಿವಾಸದ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ಮಾಡಿದ್ದರು.

ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶವಿದೆ. ಆದರೆ ಸರ್ಕಾರ 1 ಸಾವಿರ ಪೌರಕಾರ್ಮಿಕರನ್ನ ಖಾಯಂ ಮಾಡಲಾಗಿದೆ. ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಮಾತಿಗೆ ಒತ್ತಾಯ ಮಾಡಿದರು.

ಈ ಹಿಂದ ವಿವಿಧ  ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ರಾಜ್ಯದಲ್ಲಿ ಹಲವು ಕಡೆ ಪ್ರತಿಭಟನೆ ಮಾಡಿದ್ದರು. ಬೆಂಗಳೂರಿನಲ್ಲಿ ಫ್ರೀಡಂಪಾರ್ಕ್​ನಲ್ಲಿ ಕೂಡ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ