ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

Twitter
Facebook
LinkedIn
WhatsApp
Untitled 1 2

ಬೆಂಗಳೂರು: ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ (Strike) ನಡೆಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ನಿರ್ಧರಿಸಿದ್ದಾರೆ.

ವೇತನ (Salary) ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.  ನೌಕರರು ಕೆಲಸ ನಿಲ್ಲಿಸಿದರೆ ರಾಜ್ಯದ ಎಲ್ಲಾ ಕಾರ್ಖಾನೆಗಳು ಬಂದ್ ಆಗುವ ಸಾಧ್ಯತೆ ಇದೆ.

ಲೈನ್‌ಮ್ಯಾನ್‌ಗಳಿಂದ ಹಿಡಿದು ಎಂಜಿನಿಯರ್‌ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ತಾಂತ್ರಿಕ ದೋಷಗಳು, ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸುವುದು ಸೇರಿದಂತೆ ಯಾವುದೇ ಆಡಳಿತಾತ್ಮಕ ಕಾರ್ಯಗಳನ್ನು ನೌಕರರು ನಿರ್ವಹಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿಅಡಚಣೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ.

ಬೇಡಿಕೆಗಳೇನು?
ಶೇ. 40% ವೇತನ ಹೆಚ್ಚಳ ಆಗಬೇಕು.  2022ರ ಏಪ್ರಿಲ್‌ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್‌ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು. 

ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ