ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!

Twitter
Facebook
LinkedIn
WhatsApp
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ.ಈ ಕುರಿತ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

 

ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಹೇಳಿದ್ದಾರೆ.

 
 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ