ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ವಾಲಿಯರ್‌: ಪತ್ನಿಯೊಂದಿಗೆ ಜಗಳವಾಡಿದ ನಂತರ ತನ್ನ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

Twitter
Facebook
LinkedIn
WhatsApp
ಗ್ವಾಲಿಯರ್‌: ಪತ್ನಿಯೊಂದಿಗೆ ಜಗಳವಾಡಿದ ನಂತರ ತನ್ನ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಮಧ್ಯಪ್ರದೇಶ (ಆ. 11): ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿದ ನಂತರ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಭೀಕರ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಜಗಳದ ನಂತರ ಪತ್ನಿ ಅತ್ತೆ ಮನೆಗೆ ಹೋದ ನಂತರ ಆರೋಪಿ ಮಗಳನ್ನು ಟಾರ್ಗೆಟ್ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಆರೋಪಿ ವೃತ್ತಿಯಲ್ಲಿ ಬಡಗಿಯಾಗಿದ್ದ ಎಂದು ತಿಳಿದುಬಂದಿದೆ. ಬುಧವಾರ ಬೆಳಗ್ಗೆ ಬಾಲಕಿಯ ತಾಯಿ ಮನೆಗೆ ಮರಳಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ತಾಯಿ ಮನೆಗೆ ಬಂದಾಗ ಬಾಲಕಿ ಅಳುತ್ತಿದ್ದಳು.  ತಾಯಿ ಈ ಬಗ್ಗೆ ಕೇಳಿದಾಗ ಬಾಲಕಿ ತನ್ನ ಕಷ್ಟವನ್ನು ವಿವರಿಸಿದ್ದಾಳೆ.  ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಮಂಗಳವಾರದಂದು ಕೆಲವು ಕೌಟುಂಬಿಕ ವಿಚಾರದಲ್ಲಿ ಜಗಳವಾಗಿ ಆತನ ಪತ್ನಿ ಮನೆಯಿಂದ ಹೊರಟು ಹೋಗಿದ್ದರಿಂದ ಬಾಲಕಿ ತನ್ನ ತಂದೆಯೊಂದಿಗೆ ಒಬ್ಬಂಟಿಯಾಗಿರುವಾಗ ಅಪರಾಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಮನೆಗೆ ಮರಳಿದ ಆರೋಪಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ತನ್ನ ಮಗಳಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಪೊಲೀಸರು ಇದೀಗ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ