ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಘೋರ ಚಂಡಮಾರುತದ ನಂತರ ಸುಂದರವಾದ ಸಂಗತಿಗಳು ಸಂಭವಿಸಬಹುದು – ಶಿಲ್ಪಾ ಶೆಟ್ಟಿ

Twitter
Facebook
LinkedIn
WhatsApp
ಘೋರ ಚಂಡಮಾರುತದ ನಂತರ ಸುಂದರವಾದ ಸಂಗತಿಗಳು ಸಂಭವಿಸಬಹುದು – ಶಿಲ್ಪಾ ಶೆಟ್ಟಿ

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಎರಡು ತಿಂಗಳಿಗೂ ಅಧಿಕ ಕಾಲ ಜೈಲಿನಲ್ಲಿದ್ದ ರಾಜ್ ಕುಂದ್ರಾಗೆ ನಿನ್ನೆ (ಸೆಪ್ಟೆಂಬರ್ 20) ಜಾಮೀನು ಸಿಕ್ಕಿದ್ದು, ಇಂದು (ಸೆಪ್ಟೆಂಬರ್ 21) ಜೈಲಿನಿಂದ ಹೊರಬರಲಿದ್ದಾರೆ.
ಪತಿ ರಾಜ್ ಕುಂದ್ರಾ ಬಂಧನಗೊಂಡ ಬಳಿಕ ನಟಿ ಶಿಲ್ಪಾ ಶೆಟ್ಟಿ ಸಾರ್ವಜನಿಕವಾಗಿ ತೀವ್ರ ಮುಜುಗರ ಅನುಭವಿಸಿದ್ದರು. ಶಿಲ್ಪಾ ಶೆಟ್ಟಿ ಮತ್ತು ಕುಟುಂಬದ ಬಗ್ಗೆ ವದಂತಿಗಳು ಹಬ್ಬಿದವು. ಕೆಲ ವರದಿಗಳಿಂದ ಬೇಸೆತ್ತ ಶಿಲ್ಪಾ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪತಿ ರಾಜ್ ಕುಂದ್ರಾ ಅವರಿಗೆ ಜಾಮೀನು ಸಿಕ್ಕಿದ್ದು, ನಟಿ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಜಾಮೀನು ಪಡೆದ ಕೆಲವೇ ನಿಮಿಷಗಳಲ್ಲಿ, ‘’ಘೋರ ಚಂಡಮಾರುತದ ನಂತರ ಸುಂದರ ಸಂಗತಿಗಳು ಸಂಭವಿಸಬಹುದು’’ ಎಂದು ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
‘’ಘೋರ ಚಂಡಮಾರುತದ ನಂತರ ಸುಂದರವಾದ ಸಂಗತಿಗಳು ಸಂಭವಿಸಬಹುದು ಎಂಬುದನ್ನು ಸಾಬೀತುಪಡಿಸಲು ಕಾಮನಬಿಲ್ಲು ಅಸ್ತಿತ್ವದಲ್ಲಿದೆ’’ ಎಂಬ ಕೊಟೇಷನ್ ಹೊಂದಿರುವ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ.

50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ರಯಾನ್ ಥಾರ್ಪ್‌ಗೂ 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
‘’ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ನಾವು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ವಿ. ಅದನ್ನು ನ್ಯಾಯಾಲಯ ಮಂಜೂರು ಮಾಡಿದೆ’’ ಎಂದು ರಾಜ್ ಕುಂದ್ರಾ ಪರ ವಕೀಲ ನಿರಂಜನ್ ಮುಂಡರಗಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು