ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣಾ ಪ್ರಚಾರದ ವೇಳೆ ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ; ಆರ್ ಅಶೋಕ್

Twitter
Facebook
LinkedIn
WhatsApp
ಚುನಾವಣಾ ಪ್ರಚಾರದ ವೇಳೆ ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ; ಆರ್ ಅಶೋಕ್

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Elections) ಶಿವಮೊಗ್ಗ (Shivamogga) ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ (KS Eshwarappa) ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುವ ಅಧಿಕಾರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಮತ್ತು ಬಿವೈ ರಾಘವೇಂದ್ರ ಮಧ್ಯೆ ಮೋದಿ ಫೋಟೋ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದರು.

ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಗೆ ಅಧಿಕಾರ ಇದೆ. ಈಶ್ವರಪ್ಪ ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅಶೋಕ್ ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬರ ಪರಿಹಾರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ವಿಳಂಬ ಮಾಡಿದೆ. ರಾಜ್ಯ ಸರ್ಕಾರ ವಿಳಂಬ ಮಾಡಿ ನಂತರ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಬನ್ನಿ ಎನ್ನುತ್ತಾರೆ. ಯಾಕೆ ಸಂಸತ್​​​ನಲ್ಲಿ ಕಾಂಗ್ರೆಸ್ ಪಕ್ಷ ಸತ್ತು‌ ಹೋಗಿದ್ಯಾ? ಕಾಂಗ್ರೆಸ್ಸಿಗರಿಗೆ ಸಾಮರ್ಥ್ಯ ಇಲ್ಲ ಅಂತ ತೀರ್ಮಾನಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್​ನವರು ತೀರ್ಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಚಿವ ಕೃಷ್ಣ ಭೈರೇಗೌಡರು ಅಷ್ಟು ಬುದ್ಧಿವಂತರಾಗಿದ್ದರೆ ಬೆಂಗಳೂರು ಉತ್ತರದಲ್ಲಿ ಸ್ಫರ್ಧಿಸಿ ಗೆದ್ದು ಕೇಳಬಹುದಿತ್ತು. ಗೆದ್ದು ಸಂಸತ್​ನಲ್ಲಿ ಪ್ರಶ್ನೆ ಕೇಳಬಹುದಿತ್ತಲ್ವಾ? ಯಾವ ಮಂತ್ರಿಯೂ ಸ್ಪರ್ಧೆ ಮಾಡಲು ಸಿದ್ಧರಿಲ್ಲ. ಎಲ್ಲಾ ಮಂತ್ರಿಗಳು ಓಡು ಮಗಾ ಓಡು ಎನ್ನುತ್ತಿದ್ದಾರೆ. ಮಂತ್ರಿಗಳೆಲ್ಲಾ ಟೂರ್ ಹೋಗಿದ್ದಾರೆ, ಟೆಂಪಲ್ ರನ್ ಮಾಡುತ್ತಿದ್ದಾರೆ. ಎಲ್ಲ ಸಚಿವರೂ ಮಕ್ಕಳನ್ನು ಸ್ಪರ್ಧೆ ಮಾಡಿಸುತ್ತಿದ್ದಾರೆ ಎಂದು ಅಶೋಕ ವ್ಯಂಗ್ಯವಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ