ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚರಂಡಿಯಲ್ಲಿ ಸಿಕ್ಕ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವಪತ್ತೆ

Twitter
Facebook
LinkedIn
WhatsApp
ಚರಂಡಿಯಲ್ಲಿ ಸಿಕ್ಕ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವಪತ್ತೆ

ನವದೆಹಲಿ: ಚರಂಡಿಯೊಳಗೆ ಎಸೆದಿದ್ದ ಸೂಟ್‌ಕೇಸ್ ಒಂದರಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಪಶ್ಚಿಮ ಭಾಗದ ಚರಂಡಿಯಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಹುಶಃ ಮಹಿಳೆಯನ್ನು ಬೇರೆ ಜಾಗದಲ್ಲಿ ಹತ್ಯೆ ಮಾಡಿ ನಂತರ ಸೂಟ್‌ಕೇಸ್‌ನಲ್ಲಿ ತುಂಬಿಸಿ ಚರಂಡಿಗೆಸೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ. 

ಪಶ್ಚಿಮ ದೆಹಲಿಯ ಪಂಜಾಬಿ ಬಾಘ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ಇದೇ ದಾರಿಯಲ್ಲಿ ಹಾದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಈ ಸೂಟ್‌ಕೇಸ್‌ನ್ನು ಗಮನಿಸಿದ್ದು, ಅಲ್ಲಿ ಸಹಿಸಲಾಗದಷ್ಟು ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆ ಸೂಟ್‌ಕೇಸ್‌ನ್ನು ಕೆಲವು ಈಜುಗಾರರು ಹಾಗೂ ಪೊಲೀಸರ ಸಹಾಯದಿಂದ ಮೇಲೆತ್ತಲಾಗಿದೆ. 

ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಈ ಶವದ ಗುರುತು ಪತ್ತೆ ಸಾಧ್ಯವಾಗಿಲ್ಲ. ಆದರೆ ಮೃತದೇಹವೂ ಸಣ್ಣ ಪ್ರಾಯದ ಯುವತಿಯದ್ದೆಂಬಂತೆ ಕಾಣಿಸುತ್ತಿದೆ. ನಾವು ಆ ಮೃತದೇಹ, ಸೂಟ್‌ಕೇಸ್ ಹಾಗೂ ಕೆಲವು ಮಾದರಿಗಳನ್ನು ಆಸ್ಪತ್ರೆಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೊತ್ತರ ಪರೀಕ್ಷೆ (autopsy) ಹಾಗೂ ವೈದ್ಯಕೀಯ ತಪಾಸಣೆ (medical examination) ನಂತರ ನಾವು ಏನಾಗಿರಬಹುದು ಎಂದು ತಿಳಿಯಬಹುದು. ಅಲ್ಲದೇ ಸಾವಿನ ಕಾರಣವೂ ತಿಳಿದಿಲ್ಲ, ಮೃತದೇಹ ಕೊಳೆತಿರುವುದರಿಂದ ದೇಹದಲ್ಲಿ ಗಾಯಗಳಿರುವ ಬಗ್ಗೆ ನೋಡಲಾಗದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಘನಶ್ಯಾಮ ಬೆನ್ಸಲ್ (Ghanshyam Bansal) ಹೇಳಿದ್ದಾರೆ. 

ಬೇರೆ ಸ್ಥಳದಲ್ಲಿ ಯುವತಿಯನ್ನು ಕೊಂದು ಸೂಟ್‌ಕೇಸ್‌ಗೆ ತುಂಬಿಸಿ ಇಲ್ಲಿಗೆ ತಂದು ಪಂಜಾಬ್ ಬಾಘ್ (Punjabi Bagh) ಚರಂಡಿಗೆ ಎಸೆಯಲಾಗಿದೆ. ಶವವೂ ಸಂಪೂರ್ಣವಾಗಿ ಕೊಳೆತಿರುವುದರಿಂದ ಏನಾಗಿದೆ ಎಂದು ತಿಳಿಯುವುದಕ್ಕೆ ಆಗುತ್ತಿಲ್ಲ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಘಟನೆಯ ಬಗ್ಗೆ ಸುಳಿವು ಸಿಗಬಹುದು ಎಂಬ ಕಾರಣಕ್ಕೆ ಪೊಲೀಸರು ಸುತ್ತಮುತ್ತಲ ಸಿಸಿಟಿವಿಗಳನ್ನು (CCTV)  ಕೂಡ ಪರಿಶೀಲಿಸಿದ್ದಾರೆ. ಅಲ್ಲದೇ ಕೆಲವು ನಾಪತ್ತೆಯಾದ ವ್ಯಕ್ತಿಗಳ ಪಟ್ಟಿಯನ್ನು ಕೂಡ ಪರೀಕ್ಷಿಸುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ