ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

Twitter
Facebook
LinkedIn
WhatsApp
bengaluru student 780x450 1

ಬೆಂಗಳೂರು: ರಾಜನಕುಂಟೆ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ಯುವತಿಯೊಬ್ಬಳ (Girl) ಕತ್ತನ್ನು ಚಾಕುವಿನಿಂದ ಸೀಳಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಯಲಹಂಕ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ರಾಶಿ (19) ಮೃತ ಯುವತಿ. ರಾಶಿ ಎಂದಿನಂತೆ ಕಾಲೇಜು ಮುಗಿಸಿಕೊಂಡು ರಾಜನಕುಂಟೆ ಬಳಿ ಇರುವ ಶಾನುಭೋಗನಹಳ್ಳಿಯಲ್ಲಿರುವ ಮನೆಗೆ ಬಂದಿದ್ದ ರಾಶಿಯನ್ನು ತಾಯಿ ಸುಶೀಲಮ್ಮ ತೋಟದಲ್ಲಿರುವ ಹಸುವನ್ನು ಕರೆತರಲು ಹೇಳಿದ್ದಾರೆ.

ತಾಯಿಯ ಮಾತಿನಂತೆ ತಮ್ಮ ಜಮೀನನ ಪಕ್ಕದಲ್ಲಿರುವ ಲೇಔಟ್‌ನಲ್ಲಿ ಹೋಗುತ್ತಿದ್ದಾಗ ಅಪರಿಚಿತರು ಬೈಕ್‌ನಲ್ಲಿ (Bike) ಬಂದು ಕತ್ತಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಅಲ್ಲೇ ದೂರದಲ್ಲಿ ಕುರಿ ಮೇಯಿಸುತ್ತಿದ್ದ ಅಜ್ಜಿಯ ಬಳಿಗೆ ಹೋಗಿ ಜೀವ ಉಳಿಸಿಕೊಳ್ಳುವ ಪ್ರಯತ್ನವನ್ನು ರಾಶಿ ಮಾಡಿದ್ದಾಳೆ. ಆದರೆ ಚಾಕುವಿನ ಇರಿತದಿಂದ ರಕ್ತಸ್ರಾವ ಅಧಿಕವಾಗಿ ಜಮೀನನಲ್ಲೇ ರಾಶಿ ಬಿದ್ದು ಕೊನೆಯುಸಿರೆಳೆದ್ದಾರೆ. ಇನ್ನೂ ಘಟನಾ ನಡೆದ ಸ್ಥಳಕ್ಕೆ ರಾಜನಕುಂಟೆ ಪೊಲೀಸರು, ಬೆಂಗಳೂರು ಗ್ರಾಮಾಂತರ ಎಸ್‌ಪಿ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ರಾಶಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರಗೆ ರವಾನಿಸಿದ್ದು, ನಾಳೆ ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನ ಹಸ್ತಾಂತರ ಮಾಡಲಿದ್ದಾರೆ. ಕೊಲೆಯನ್ನು ಯಾರು ಯಾಕೆ ಮಾಡಿದ್ದಾರೆ ಅನ್ನೋದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ