ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!

Twitter
Facebook
LinkedIn
WhatsApp
ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!

ಬೆಂಗಳೂರು: ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ, ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಇವುಗಳ ತಯಾರಿಕೆಯಲ್ಲಿ ಕೃತಕ ಬಣ್ಣ ಬೆರೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆರೋಗ್ಯದ ಮೇಲೆ ದುಷ್ಪರಿಣಾಮ ಹಿನ್ನೆಲೆ ಕ್ರಮ

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್​ಗೆ ಕೃತಕ ಬಣ್ಣ ಬೆರಸುವಿಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ. ಹೀಗೆ ಪರೀಕ್ಷೆಗೊಳಪಡಿಸಿದ ಮಾದರಿಗಳಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದು ಅಸುರಕ್ಷಿತ ಅನ್ನೋದು ಪರೀಕ್ಷಾ ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ರ ನಿಯಮ 3(1) (zz) (viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

ಕಬಾಬ್ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006, 223 (1) (zz) (viii) 2 ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಮಗಳು 2011ರ ನಿಯಮ 16.0 ಗಳಡಿ ಅವಕಾಶ ಇಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಿದೆ.

ಆದೇಶ ಉಲ್ಲಘಿಸಿದ್ರೆ ಭಾರಿ ದಂಡ ಮತ್ತು ಶಿಕ್ಷೆ

ಈ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ. ಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist