ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್‌ ಭರ್ಜರಿ ಗೆಲುವು ; ಚಾಲೆಂಜ್ ಹಾಕಿದ್ದ ಪ್ರದೀಪ್ ಈಶ್ವರ್ಗೆ ರಾಜೀನಾಮೆಗೆ ಒತ್ತಾಯ..!

Twitter
Facebook
LinkedIn
WhatsApp
ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್‌ ಭರ್ಜರಿ ಗೆಲುವು ; ಚಾಲೆಂಜ್ ಹಾಕಿದ್ದ ಪ್ರದೀಪ್ ಈಶ್ವರ್ಗೆ ರಾಜೀನಾಮೆಗೆ ಒತ್ತಾಯ..!

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (​Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

“ನನ್ನ ಮಾತಿಗೆ ನಾನು ಬದ್ಧ. ಚಿಕ್ಕಬಳ್ಳಾಪುರ ವಿಧಾನಸಭಾ ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ಜೂನ್‌ 5ರಂದು ಬೆಳಗ್ಗೆ 5ಗಂಟೆಗೆ ರಾಜೀನಾಮೆ ನೀಡಲಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ನಾನೇ ನೇರ ಹೊಣೆ ಎಂದು” ಶಾಸಕ ಪ್ರದೀಪ್‌ ಈಶ್ವರ್‌ ಅವರು ಹೇಳಿದಂತಿರುವ ಪೋಸ್ಟರ್‌ ವೈರಲ್‌ ಮಾಡಲಾಗಿದೆ. ಆದರೆ, ಇದು ಶಾಸಕ ಪ್ರದೀಪ್‌ ಈಶ್ವರ್‌ ಅವರ ಅಧಿಕೃತ ಪೋಸ್ಟರ್‌ ಅಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿ ಹಾಲಿ ಸಂಸದ ಬಚ್ಚೇಗೌಡರ ಬದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿದ್ದ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಬಿಜೆಪಿ ಲೋಕಸಭಾ ಚುನಾವಣಾ ಟಿಕೆಟ್‌ ನೀಡಿತ್ತು. ಇದೀಗ ಸುಧಾಕರ್‌ ಅವರು ಭಾರಿ ಅಂತರರಿಂದ ಗೆಲುವು ದಾಖಲಿಸಿದ್ದು, ಕಾರ್ಯಕರ್ತರರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ