ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರು ಮೂಲದ ನಕ್ಸಲ್‌ ನಾಯಕ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಕೇರಳದಲ್ಲಿ ಬಂಧನ.

Twitter
Facebook
LinkedIn
WhatsApp
ಚಿಕ್ಕಮಗಳೂರು ಮೂಲದ ನಕ್ಸಲ್‌ ನಾಯಕ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಕೇರಳದಲ್ಲಿ ಬಂಧನ.

ಕೋಯಿಕ್ಕೋಡ್ : ಕಳೆದೆರಡು ದಶಕಗಳಿಂದಲೂ ಮಲೆನಾಡಲ್ಲಿ ನಕ್ಸಲ್‌ ಚಳುವಳಿಯ ನಾಯಕನಾಗಿ ಗುರುತಿಸಿಕೊಂಡಿರುವ ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿ ಹಿರಿಯ ಮಾವೋವಾದಿ ನಾಯಕ ಬಿ.ಜಿ.ಕೃಷ್ಣಮೂರ್ತಿ (Naxal leader B G Krishnamurthy) ಹಾಗೂ ಹಾಗೂ ಸಾವಿತ್ರಿಯನ್ನುಕೇರಳ ಪೊಲೀಸ್‌ನ ಭಯೋತ್ಪಾದನೆ ನಿಗ್ರಹದಳ (ಎಟಿಎಸ್) ಬಂಧಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ನಕ್ಸಲ್ ಹೋರಾಟದ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಬಿ.ಜಿ.ಕೃಷ್ಣಮೂರ್ತಿ 2003 ರಿಂದ ಭೂಗತನಾಗಿದ್ದ, 2018ರಲ್ಲಿ ಅವರ ತಂದೆ ಗೋಪಾಲ ರಾವ್ ನಿಧನರಾದಾಗಲೂ ಅಂತ್ಯಕ್ರಿಯೆಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಭಾಗಿಯಾಗಿರಲಿಲ್ಲ. ಜಿಲ್ಲೆಯ ಮಾವೋವಾದಿ ವಲಯಗಳಲ್ಲಿ ಬಿಜಿಕೆ’ ಎಂದೇ ಪರಿಚಿತರಾಗಿರುವ ಕೃಷ್ಣಮೂರ್ತಿ ವಯನಾಡಿನ ಸುಲ್ತಾನ್ ಬತೇರಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಪಿಐ (ಮಾವೋವಾದಿ)ನ ಕಬನಿ ದಳಂ ಕಮಾಂಡರ್ ಸಾವಿತ್ರಿ ಅಲಿಯಾಸ್ ರೆಜಿತಾಳನ್ನೂ ಬಿ.ಜಿ.ಕೃಷ್ಣಮೂರ್ತಿಯ ಜೊತೆಗೆ ಬಂಧಿಸಲಾಗಿದೆ.
ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಮತ್ತೆ ನಕ್ಸಲರು ಸಕ್ರಿಯರಾಗುವ ಮೂಲಕ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ನಿದ್ದೆಗೆಡಿಸಿದ್ದರು. ಆದರೆ ಎಎನ್‌ಎಫ್‌ ಪಡೆ ನಕ್ಸರನ್ನು ಹೆಡೆಮುರಿಕಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದಲೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್‌ ಚಳುವಳಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದ ನಕ್ಸಲ್‌ ನಾಯಕರು ಇದೀಗ ಹೊರ ರಾಜ್ಯಕ್ಕೆ ವಲಸೆ ಹೋಗಿದ್ದಾರೆ ಅನ್ನೋದು ಬಿಜಿಕೆ ಹಾಗೂ ಸಾವಿತ್ರಿ ಬಂಧನದಿಂದ ಹುಸಿಯಾಗಿದೆ. ಇತ್ತೀಚಿಗಷ್ಟೇ ಪಕ್ಷದ ಕೇಂದ್ರ ಸಮಿತಿಗೆ ಪದೋನ್ನತಿಗೊಂಡಿದ್ದ ಕೃಷ್ಣಮೂರ್ತಿ ಬಂಧನ ಪೊಲೀಸರ ಪಾಲಿಗೆ ದೊಡ್ಡ ಸಾಧನೆಯಾಗಿದೆ. 2016, ನವಂಬರ್ ನಲ್ಲಿ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆದಿದ್ದ ಎನ್ಸೆಂಟರ್ನಲ್ಲಿ ಕುಪ್ಪು ದೇವರಾಜ ಕೊಲ್ಲಲ್ಪಟ್ಟ ಬಳಿಕ ಬಿಜಿಕೆಯನ್ನು ಸಿಪಿಐ (ಮಾವೋವಾದಿ)ನ ಹಂಗಾಮಿ ಕಾರ್ಯದರ್ಶಿಯನ್ನಾಗಿ ಖಾಯಂ ಆಗಿ ನೇಮಕಗೊಳಿಸಲಾಗಿತ್ತು ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಬಿ.ಜಿ.ಕೃಷ್ಣಮೂರ್ತಿ ವಿರುದ್ದ ಸುಮಾರು 53 ಪ್ರಕರಣಗಳಿದ್ದರೆ, 36ವರ್ಷದ ಸಾವಿತ್ರಿ ಮೇಲೆ 22 ಕೇಸ್ ಗಳಿವೆ. 2005 ರಲ್ಲಿ ಸಾಕೇತ್ ರಾಜನ್ ಹತ್ಯೆಯ ಮತ್ತು 2006ರಲ್ಲಿ ನಕ್ಸಲ್ ಆಂದೋಲನದಲ್ಲಿ ವಿಭಜನೆಯ ಬಳಿಕ ಅವರು ಕರ್ನಾಟಕದಲ್ಲಿ ಪಕ್ಷದ ನಾಯಕ ಬಿ.ಜಿ.ಕೃಷ್ಣಮೂರ್ತಿ ಗುರುತಿಸಿಕೊಂಡಿದ್ದ. ಶೃಂಗೇರಿ ಮೂಲದ ಬಿ.ಜಿ.ಕೃಷ್ಣಮೂರ್ತಿ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಪದವಿ ಮುಗಿಸಿದ ನಂತರ ಎಲ್‌ಎಲ್‌ಬಿ ಶಿಕ್ಷಣವನ್ನು ಶಿವಮೊಗ್ಗದಲ್ಲಿ ಪಡೆದಿದ್ದರು. ವಿದ್ಯಾರ್ಥಿ ಜೀವನ ದಲ್ಲಿಯೇ ಮಾವೋವಾದಿ ವಿಚಾರಧಾರೆಯಿಂದ ಪ್ರಭಾವಿತರಾಗಿದ್ದರು. 2000ರ ಆಸುಪಾಸಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ ಸಂದರ್ಭ ಚುರುಕುಗೊಂಡ ನಕ್ಸಲ್ ಚಟುವಟಿಕೆಗೆ ಸೇರ್ಪಡೆಗೊಂಡ ಬಿ.ಜಿ.ಕೃಷ್ಣಮೂರ್ತಿ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.
ಇನ್ನು ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ಸಾವಿತ್ರಿ ಮಾವೋವಾದಿ ನಾಯಕ ವಿಕ್ರಮ ಗೌಡನ ಪತ್ನಿಯಾಗಿದ್ದಳು. ಈತನೂ ವಯನಾಡ- ಕೋಝಿಕ್ಕೋಡ್ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿಗಳ ಕಬನಿ ದಳಂನಲ್ಲಿದ್ದಾನೆ. ಆದರೆ ಕಳೆದ ಎರಡು ವರ್ಷಗಳ ಹಿಂದೆ ವಿಕ್ರಮ ಗೌಡನಿಂದ ವಿಚ್ಛೇದನ ಪಡೆಯಲು ಪಕ್ಷವು ಆಕೆಗೆ ಅನುಮತಿಯನ್ನು ನೀಡಿತ್ತು ಎಂದು ತಿಳಿದು ಬಂದಿದೆ. ಇಬ್ಬರು ಮಾವೋವಾದಿ ನಾಯಕರನ್ನು ಬಂಧಿಸಿರುವ ಕೇರಳ ಪೊಲೀಸರು ಇಬ್ಬರನ್ನೂ ಕೂಡ ಚಿಕ್ಕಮಗಳೂರು ಜಿಲ್ಲಾ ಪೊಲೀಸರ ವಶಕ್ಕೆ ಹಸ್ತಾಂತರ ಮಾಡುವ ಸಾಧ್ಯತೆಯಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು