ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿರತೆ ದಾಳಿಗೊಳಗಾಗಿದ್ದ ಯುವತಿ ಸಾವು, ಟಿ. ನರಸೀಪುರ ತಾಲೂಕಿನಲ್ಲೇ ಇದು 2ನೇ ಬಲಿ

Twitter
Facebook
LinkedIn
WhatsApp
ಚಿರತೆ ದಾಳಿಗೊಳಗಾಗಿದ್ದ ಯುವತಿ ಸಾವು, ಟಿ. ನರಸೀಪುರ ತಾಲೂಕಿನಲ್ಲೇ ಇದು 2ನೇ ಬಲಿ

ಮೈಸೂರು: ಚಿರತೆ ( Leopard ) ದಾಳಿಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ಡಿಸೆಂಬರ್ 01) ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಕಳೆದ ತಿಂಗಳಷ್ಟೇ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದೀಗ ಮೇಘನಾಳನ್ನ ಬಲಿಪಡೆದುಕೊಂಡಿದೆ. ಒಂದು ತಿಂಗಳಲ್ಲೇ ಚಿರತೆ ದಾಳಿಗೆ 2ನೇ ಬಲಿಯಾಗಿರುವುದರಿಂದ ಇದೀಗ ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಭಯ ಶುರುವಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.

ಇದರಿಂದ ರೊಚ್ಚಿಗೆದ್ದ ಎಸ್.ಕೆಬ್ಬೆಹುಂಡಿ ಗ್ರಾಮಸ್ಥರು, ಕೂಡಲೇ ಚಿರತೆ ಸೆರೆಹಿಡಿದು ಸ್ಥಳಾಂತರ ಮಾಡುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಮೈಸೂರು ಭಾಗದಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಲೇ ಇವೆ. ಇದರಿಂದ ಜನರು ಭಯದಿಂದಲೇ ಹೊರಗಡೆ ಓಡಾಡುವಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ