ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವು – ಶವ ತರಿಸಿಕೊಳ್ಳಲು ಸಹಾಯ ಕೋರಿದ ಕುಟುಂಬಸ್ಥರು

Twitter
Facebook
LinkedIn
WhatsApp
227145 relationshiptips 1

ಚೆನ್ನೈ: ಚೀನಾದಲ್ಲಿ (China) ಅನಾರೋಗ್ಯದಿಂದ ಭಾರತದ ವಿದ್ಯಾರ್ಥಿ (Indian Student) ಸಾವನ್ನಪ್ಪಿರುವ ಘಟನೆ ನಡೆದಿದ್ದು, ಯುವಕನ ಮೃತದೇಹ (Dead Body) ತರಿಸಿಕೊಳ್ಳಲು ಆತನ ಕುಟುಂಬಸ್ಥರು ವಿದೇಶಾಂಗ ಸಚಿವಾಲಯದ (Foreign Ministry) ಮೊರೆ ಹೋಗಿದ್ದಾರೆ.

ತಮಿಳುನಾಡು (Tamil Nadu) ಮೂಲದ ವಿದ್ಯಾರ್ಥಿ ಅಬ್ದುಲ್ ಶೇಖ್ (22) ಕಳೆದ 5 ವರ್ಷಗಳಿಂದ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಅವರು ಭಾರತಕ್ಕೆ ಮರಳಿದ್ದರು. ಆದರೆ ಡಿಸೆಂಬರ್ 11 ರಂದು ಕಿಕಿಹಾರ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಇಂಟರ್ನ್‌ಶಿಪ್‌ಗಾಗಿ ಚೀನಾಗೆ ಮತ್ತೆ ತೆರಳಬೇಕಾಯಿತು. 

ಚೀನಾಗೆ ತೆರಳಿದ ಬಳಿಕ ಅವರು 8 ದಿನಗಳ ಕ್ವಾರಂಟೈನ್ ಅನ್ನು ಪೂರ್ಣಗೊಳಿಸಿದರು. ಬಳಿಕ ಅವರು ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯುತ್ತಿದ್ದ ಸಂದರ್ಭ ಅನಾರೋಗ್ಯಕ್ಕೀಡಾದರು. ಬಳಿಕ ಅವರನ್ನು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು. ಆದರೆ ಅವರು ಅಲ್ಲಿ ಸಾವನ್ನಪ್ಪಿದ್ದಾರೆ.

ಇದೀಗ ಯುವಕನ ಮೃತದೇಹವನ್ನು ಭಾರತಕ್ಕೆ ಮರಳಿ ತರಿಸಿಕೊಳ್ಳಲು ಆತಕ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಮೃತದೇಹವನ್ನು ಸ್ವದೇಶಕ್ಕೆ ತರಲು ಸಹಾಯ ಮಾಡುವಂತೆ ಅಬ್ದುಲ್ ಶೇಖ್ ಅವರ ಸಂಬಂಧಿಕರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ