ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದ ಟಿಕ್‌ಟಾಕ್ ಅನ್ನು 30 ದಿನದೊಳಗೆ ಡಿವೈಸ್‌ಗಳಿಂದ ಡಿಲೀಟ್ ಮಾಡಿ – ಸರ್ಕಾರಿ ನೌಕರರಿಗೆ ಯುಎಸ್ ಸೂಚನೆ

Twitter
Facebook
LinkedIn
WhatsApp
tiktok video 3689 1280x960 1

ವಾಷಿಂಗ್ಟನ್: ಅಮೆರಿಕದ (USA) ಫೈಟರ್ ಜೆಟ್‌ಗಳು ತಮ್ಮ ವಾಯುನೆಲೆಯ ಮೇಲೆ ಹಾರಾಡುತ್ತಿದ್ದ ಚೀನಾ (China) ಬೇಹುಗಾರಿಕಾ ಬಲೂನ್ ಅನ್ನು ಹೊಡೆದುರುಳಿಸಿದ ನಂತರ ಎರಡು ದೈತ್ಯ ಮಿಲಿಟರಿ ರಾಷ್ಟ್ರಗಳ ನಡುವೆ ಶೀತಲ ಸಮರ ಶುರುವಾಗಿದೆ.

ಈ ನಡುವೆ ಎಲ್ಲಾ ಸರ್ಕಾರಿ ಡಿವೈಸ್‌ಗಳಿಂದ ಟಿಕ್‌ಟಾಕ್ (TikTok) ಅನ್ನು ಡಿಲೀಟ್ ಮಾಡುವಂತೆ ಅಮೆರಿಕ ವೈಟ್‌ಹೌಸ್ 30 ದಿನಗಳ ಗಡುವು ನೀಡಿದೆ. ಅಮೆರಿಕದ ರಕ್ಷಣಾ ಇಲಾಖೆಗಳು ಈಗಾಗಲೇ ಟಿಕ್‌ಟಾಕ್ ನಿರ್ಬಂಧಿಸಿವೆ. ಇದೀಗ ರಾಷ್ಟ್ರವ್ಯಾಪಿ ನಿಷೇಧಕ್ಕೆ ಮುಂದಾಗಿದ್ದು, ಇದು ಸರ್ಕಾರಿ ದತ್ತಾಂಶಗಳನ್ನು ರಕ್ಷಿಸುವಲ್ಲಿ ಮತ್ವದ ಹೆಜ್ಜೆ ಎಂದು ಹೇಳಲಾಗಿದೆ. 

ಜೋ ಬೈಡನ್ (Joe Biden) ಹಾಗೂ ಕಮಲಾ ಹ್ಯಾರಿಸ್ (Kamala Harris) ನೇತೃತ್ವದ ಆಡಳಿತವು ಡಿಜಿಟಲ್ ಮೂಲ ಸೌಕರ್ಯಗಳ ರಕ್ಷಣೆಗೆ ಮಹತ್ವದ ಹೆಜ್ಜೆಯನ್ನಿರಿಸಿದೆ. ಜೊತೆಗೆ ಅಮೆರಿಕದ ಜನರ ಸುರಕ್ಷತೆ ಹಾಗೂ ಗೌಪ್ಯತೆ ರಕ್ಷಿಸಲು ವಿದೇಶಿ ಆಪ್‌ಗಳ ಪ್ರವೇಶ ತಡೆಯಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಫೆಡರಲ್ ಏಜೆನ್ಸಿಯ (Federal Agencies) ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ ಕ್ರಿಸ್ ಡೆರುಶಾ ಹೇಳಿದ್ದಾರೆ. 

ಚೀನಾ ಮೂಲದ ಟಿಕ್‌ಟಾಕ್ ಆಪ್ ರಾಷ್ಟ್ರವ್ಯಾಪಿ ನಿಷೇಧಿಸಲು ಯುಎಸ್ ವಿದೇಶಾಂಗ ವ್ಯವಹಾರಗಳ ಸಮಿತಿಯು ಅಧ್ಯಕ್ಷ ಜೋ ಬೈಡನ್ ಅವರಿಗೆ ಅಧಿಕಾರ ನೀಡಲು ಒಮ್ಮತದ ನಿರ್ಧಾರ ಕೈಗೊಂಡು ಮತ ಹಾಕಿದೆ. ಈಗಾಗಲೇ ಮಸೂದೆ ಮಂಡಿಸಿದ್ದು, ಈ ಮಸೂದೆ ಅಂಗೀಕಾರವಾದರೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕುವ ಯಾವುದೇ ಸಾಫ್ಟ್‌ವೇರ್‌ ಅಪ್ಲಿಕೇಶನ್‌ಗಳನ್ನು ನಿಷೇಧಿಸಲು ಆಡಳಿತಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ವಿದೇಶಾಂಗ ಸಮಿತಿ ಅಧ್ಯಕ್ಷ ಮೆಕ್‌ಕಾಲ್ ಹೇಳಿದ್ದಾರೆ.

ಸುಮಾರು 10 ಕೋಟಿ ಜನರು ಬೈಟ್‌ಡ್ಯಾನ್ಸ್ ಲಿ. (Byte Dance LT.) ಒಡೆತನದ ಟಿಕ್‌ಟಾಕ್ ಬಳಕೆದಾರರಿದ್ದಾರೆ. ಜೊತೆಗೆ ಹದಿಹರೆಯದ ವಯಸ್ಸಿನ 3ನೇ ಎರಡು ಭಾಗದಷ್ಟು ಮಂದಿ ಟಿಕ್‌ಟಾಕ್ ಬಳಸುತ್ತಿದ್ದು, ಇದರಿಂದ ಡೇಟಾ ಬಳಕೆಯ ಮೇಲೆ ನಿಯಂತ್ರಣ ಪಡೆಯಬಹುದಾಗಿದೆ. ಟಿಕ್‌ಟಾಕ್ ಡೌನ್‌ಲೋಡ್ ಮಾಡಿದರೆ, ಚೀನಾವು ವೈಯಕ್ತಿಕ ಮಾಹಿತಿಗಳನ್ನು ಕದಿಯಲು ಹಿಂಬಾಗಿಲು ತೆರೆದಂತಾಗುತ್ತದೆ. ಆದ್ದರಿಂದ ರಾಷ್ಟ್ರೀಯ ಭದ್ರತಾ ಪರಿಶೀಲನೆಯ ಭಾಗವಾಗಿ ಡೇಟಾ ಗೌಪ್ಯತಾ ಯೋಜನೆಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವೈಟ್‌ಹೌಸ್ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ