ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

Twitter
Facebook
LinkedIn
WhatsApp
ಚುನಾವಣಾ ಕಣದಿಂದ ಹಿಂದೆ ಸರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ: ಕರಾವಳಿಯ ಜನಪ್ರಿಯ ರಾಜಕಾರಣಿ, ಸರಳ ಮತ್ತು ಸಜ್ಜನಿಕೆಯ ಮೂಲಕ ಖ್ಯಾತಿ ಹೊಂದಿರುವ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

72 ರ ಹರೆಯದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕುಂದಾಪುರ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ಬಾರಿ ಬಿಜೆಪಿಯಿಂದ ಮತ್ತು ಒಂದು ಬಾರಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು.

”ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಶ್ರೀನಿವಾಸ್ ಶೆಟ್ಟಿ ಅವರು ಉಲ್ಲೇಖಿಸಿದ್ದಾರೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲಾ ವರ್ಗದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.

”ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು ಎಲ್ಲಾ ವರ್ಗದ ಮತದಾರರ ನೋವು, ನಲಿವುಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ” ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

”ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿ ಎಂದು ಹೇಳಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ