ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
Twitter
Facebook
LinkedIn
WhatsApp

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ(Veerappa Moily) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ವೀರಪ್ಪ ಮೊಯ್ಲಿ ಕೊಂಚ ನಿರಾಸೆಯಲ್ಲಿದ್ದರು. ಇದೀಗ ಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ವೀರಪ್ಪ ಮೊಯ್ಲಿ ರಾಜಕೀಯ ಹಾದಿ ಹೇಗಿತ್ತು?
- 2012: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ.
- 2011–2012: ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಕ್ಯಾಬಿನೆಟ್ ಮಂತ್ರಿ
- 2009–2011: ಕಾನೂನು ಮತ್ತು ನ್ಯಾಯದ ಕ್ಯಾಬಿನೆಟ್ ಮಂತ್ರಿ
- 2006–2009: ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ OBC ಗಳಿಗೆ 27 ಪ್ರತಿಶತ ಮೀಸಲಾತಿಯ ಅನುಷ್ಠಾನಕ್ಕಾಗಿ ಉಸ್ತುವಾರಿ ಸಮಿತಿಯ ಅಧ್ಯಕ್ಷ.
- 2002–2004: ಕಂದಾಯ ಸುಧಾರಣಾ ಆಯೋಗದ ಅಧ್ಯಕ್ಷರು
- 2005–2009:2ನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು
- 2000–2002: ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷರು
- 1992–1994: ಕರ್ನಾಟಕದ ಮುಖ್ಯಮಂತ್ರಿ
- 1989–1992: ಕಾನೂನು, ಯುವಜನ ಸೇವೆ, ಸಂಸ್ಕೃತಿ, ಮಾಹಿತಿ, ಸಂಸದೀಯ ವ್ಯವಹಾರಗಳು ಮತ್ತು ಶಿಕ್ಷಣ ಸಚಿವ
- 1983–1985: ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ.
- 1980–1982: ಕರ್ನಾಟಕ ಹಣಕಾಸು ಮತ್ತು ಯೋಜನಾ ಸಚಿವ.
- 1974–1977: ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವ.