ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

ಚೆನ್ನೈ ಸೂಪರ್ ಕಿಂಗ್ಸ್ - ಗುಜರಾತ್ ಟೈಟಾನ್ಸ್ ಮುಖಾಮುಖಿ ; ಯಾರಾಗ್ತಾರೆ ಐಪಿಎಲ್ 2023 ಚಾಂಪಿಯನ್

Twitter
Facebook
LinkedIn
WhatsApp
Untitled 23

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಕೊನೆಯ ದಿನಕ್ಕೆ ಬಂದು ನಿಂತಿದೆ. ಸುಮಾರು ಎರಡು ತಿಂಗಳುಗಳಿಂದ ನಡೆಯುತ್ತಿರುವ ಐಪಿಎಲ್ ಹಬ್ಬಕ್ಕೆ ಇಂದು ತೆರೆ ಬೀಳಲಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಇಂದು ಮೇ 28 ಭಾನುವಾರ ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್​ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಸಿಎಸ್​ಕೆ ತಂಡ ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ಕ್ವಾಲಿಫೈಯರ್-1 ರಲ್ಲಿ ಇದೇ ಗುಜರಾತ್ ತಂಡವನ್ನು ಸೋಲಿಸಿ ನೇರವಾಗಿ ಫೈನಲ್​ಗೆ ಪ್ರವೇಶ ಪಡೆದಿತ್ತು. ಚೆನ್ನೈ ಓಪನರ್​ಗಳಾದ ರುತುರಾಯ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶಿವಂ ದುಬೆ ಪ್ರತಿ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್​ನಲ್ಲಿ ಸಿಎಸ್​ಕೆ ಪರ ತುಶಾರ್ ದೇಶ್​ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ.

ಜಿಟಿ ತಂಡ ಇಡೀ ಟೂರ್ನಿಯಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಾ ಬಂದಿದೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ ನೀಡಿದ ಪ್ರದರ್ಶನ ಅದ್ಭುತವಾಗಿತ್ತು. ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಗಿಲ್ ಅಂತೂ ಬೊಂಬಾಟ್ ಫಾರ್ಮ್​ನಲ್ಲಿದ್ದು ಹಿಂದಿನ ಮ್ಯಾಚ್​ನಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಇವರ ಖಾತೆಯಿಂದ ಈ ಬಾರಿ ಒಟ್ಟು ಮೂರು ಸೆಂಚುರಿ ಬಂದಿವೆ. ನಾಯಕ ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಪಾಂಡ್ಯ ಜೊತೆ ರಶೀದ್ ಖಾನ್ ಆಲ್ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ಚೆನ್ನೂ-ಗುಜರಾತ್ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ‍್ಯಾಪರ್​​ಗಳು ಪ್ರದರ್ಶನ ನೀಡಲಿದ್ದಾರೆ. ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್​ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ. ಸಮಾರೋಪ ಸಮಾರಂಭ ಸಂಜೆ 6 ಗಂಟೆ ಸುಮಾರಿಗೆ ಆರಂಭವಾಗಲಿದೆ.

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ