ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಜಗದೀಶ್ಶೆಟ್ಟರ್, ಲಕ್ಷ್ಮಣ ಸವದಿ, ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಶಕ್ತಿ ಬಂದಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋಲು ಗೆಲವು ಇರೋದೆ ಆದರೆ ಸಿಕ್ಕ ಅವಕಾಶ ಬಳಸಿಕೊಳ್ಳಬೇಕು ಎಂದ ಅವರು, ಚುನಾವಣಾ ಸಂದರ್ಭದಲ್ಲಿ ನಾನು ಪ್ರಚಾರದಲ್ಲಿ ಬ್ಯೂಸಿ ಆಗಿದ್ದ ಕಾರಣ, ಬಿ ಫಾರಂ ಕೊಟ್ಟ ಮೇಲೆ ಜಗದೀಶ್ ಶೆಟ್ಟರ್ ಜೊತೆ ಮಾತಾಡಿರಲಿಲ್ಲ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ರಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಬಲ ಬಂದಿದೆ ಎಂದರು.
ಜೆಡಿಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದವರಿಂದ ನಮಗೆ ಶಕ್ತಿ ಬಂದಿದೆ. ಅವರ ಶಕ್ತಿ ತುಂಬಬೇಕಾದದ್ದು ನಮ್ಮ ಕರ್ತವ್ಯ. ಹೀಗಾಗಿ ನಾನು ಪಕ್ಷದ ಆಂತರಿಕ ವಿಚಾರದ ಸಲಹೆ ಪಡೆಯಲು ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ರಾಜಕರಣದಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕಿದೆ ಎಂಬುವುದು ನಮಗೆ ಗೊತ್ತಿದೆ. ನಾವು ಅವರ ಜೊತೆ ಇದ್ದೇವೆ ಅವರನ್ನು ಕೈಬಿಡುವ ಪ್ರಶ್ನೇಯೆ ಬರಲ್ಲ ಎಂದರು. ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಗ್ಯಾರಂಟಿಗಳು, ಶಾಸಕಾಂಗ ಸಭೆ, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ನಡುವೆಯೇ ಬಿಡುವು ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.
ಕುತೂಹಲ ಕೆರಳಿಸಿದ ಡಿಕೆಶಿ ಭೇಟಿ
ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಇದೀಗ ಡಿಕೆಶಿ ಭೇಟಿ ವಿಚಾರ ಕುತೂಹಲ ಕೆರಳಿಸಿದೆ. ಶೆಟ್ಟರ್ಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವ ಭರವಸೆಯ ಜೊತೆಗೆ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಲೋಕಸಭೆ ಚುನಾವಣೆ ಟಾರ್ಗೆಟ್ ಮಾಡಿ ಇಬ್ಬರೂ ನಾಯಕರನ್ನು ಸ್ಪರ್ಧೆಗಿಳಿಸುತ್ತೀರ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಶೆಟ್ಟರ್, ಸವದಿ ಕಾಂಗ್ರೆಸ್ ಪಕ್ಷದ ನಾಯಕರು. ಅವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಗೆದ್ದಿರಬಹುದು, ಸೋತಿರಬಹುದು ಅವರು ನಮ್ಮ ನಾಯಕರು ಎಂದು ತಿಳಿಸಿದರು.
ಮಂತ್ರಿಗಳಿಂದ ಸಭೆ
ಇವತ್ತು ಎಲ್ಲಾ ಮುಖ್ಯಂತ್ರಿಗಳು ಸಭೆ ಸೇರುತ್ತಿದ್ದೇವೆ. ನಾಳೆ ಸಚಿವ ಸಂಪುಟ ಸಭೆಯಿದೆ. ಈ ಸಂಬಂಧ ಮುಂಚಿತವಾಗಿ ಸಿಎಂ ಕೆಲವರನ್ನು ಆಹ್ವಾನಿಸಿದ್ದು, ಇಲಾಖೆಯ ಮಂತ್ರಿಗಳೊಂದಿಗೆ ಚರ್ಚಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತೇವೆ ಎಂದರು.