ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಡೇಜಾ ದಾಳಿಗೆ ಆಸೀಸ್ ಕಂಗಾಲು; ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ, 2-0 ಅಂತರದ ಮುನ್ನಡೆ

Twitter
Facebook
LinkedIn
WhatsApp
ಜಡೇಜಾ ದಾಳಿಗೆ ಆಸೀಸ್ ಕಂಗಾಲು; ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ, 2-0 ಅಂತರದ ಮುನ್ನಡೆ

IND vs AUS: ದೆಹಲಿಯಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. 

ದೆಹಲಿಯಲ್ಲಿ ನಡೆದ ಬಾರ್ಡರ್ -ಗವಾಸ್ಕರ್  ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ 115 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ರೋಹಿತ್ ಪಡೆ ಮೂರನೇ ದಿನದಾಟದ 2ನೇ ಸೆಷನ್​ಲ್ಲಿಯೇ ಗುರಿ ತಲುಪಿತು. ಈ ಗೆಲುವಿನೊಂದಿಗೆ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆನ್ನುವ ಆಸೀಸ್ ತಂಡದ ಮಹಾ ಕನಸನ್ನು ಟೀಂ ಇಂಡಿಯಾ ಭಗ್ನ ಮಾಡಿದೆ. ಇದೀಗ ಈ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಆಸೀಸ್ ಗೆದ್ದರೂ ಸರಣಿ ಸಮಬಲದೊಂದಿಗೆ ಅಂತ್ಯಗೊಳ್ಳಲಿದೆ.

ಆಸ್ಟ್ರೇಲಿಯಾ ಸ್ವಲ್ಪ ಉತ್ತಮವಾಗಿ ಆಡಿದ್ದರೆ, ದೆಹಲಿಯಲ್ಲಿ ಇಡೀ ಪಂದ್ಯದ ಚಿತ್ರಣವೇ ಬೇರೆ ಆಗಬಹುದಿತ್ತು. ಏಕೆಂದರೆ ಎರಡನೇ ದಿನದಾಟ ಮುಗಿದ ಬಳಿಕ ಪಂದ್ಯದಲ್ಲಿ ಆಸೀಸ್ ಹಿಡಿತ ಸಾಧಿಸಿರುವುದು ಎದ್ದು ಕಾಣುತ್ತಿತ್ತು. ಆದರೆ ಮೂರನೇ ದಿನ ಮೈದಾನಕ್ಕೆ ಇಳಿದ ಕೂಡಲೇ ಆಸೀಸ್ ಆಟಗಾರರು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ, ಮೂರನೇ ದಿನ ತಂಡದ 9 ವಿಕೆಟ್‌ಗಳು ಕೇವಲ 52 ರನ್‌ಗಳಿಗೆ ಪತನಗೊಂಡವು, ಇದರಲ್ಲಿ ಅಶ್ವಿನ್ ಮತ್ತು ಜಡೇಜಾ ದೊಡ್ಡ ಪಾತ್ರವನ್ನು ವಹಿಸಿದರು.

ದೆಹಲಿ ಟೆಸ್ಟ್​ನ ಮೂರನೇ ದಿನದ ಮೊದಲ ಸೆಷನ್ ಮುಗಿಯುವ ಮುನ್ನವೇ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಅಂತ್ಯಗೊಂಡಿತು. ಮೂರನೇ ದಿನ 18.2 ಓವರ್‌ ಆಡಿದ ಆಸೀಸ್ ಸ್ಕೋರ್ ಬೋರ್ಡ್‌ಗೆ ಕೇವಲ 52 ರನ್ ಸೇರಿಸಿ 9 ವಿಕೆಟ್ ಕಳೆದುಕೊಂಡಿತು. ಈ 9 ವಿಕೆಟ್‌ಗಳಲ್ಲಿ 4 ವಿಕೆಟ್‌ಗಳು ಕೇವಲ 1 ರನ್‌ಗೆ ಬಿದ್ದಿದ್ದು ವಿಶೇಷವಾಗಿತ್ತು. ಅದರಲ್ಲೂ ಕಾಂಗರೂ ಬ್ಯಾಟ್ಸ್‌ಮನ್‌ಗಳು ಸ್ವೀಪ್ ಶಾಟ್‌ ಆಡುವ ಯತ್ನದಲ್ಲಿಯೇ ವಿಕೆಟ್ ಕಳೆದುಕೊಂಡಿದ್ದು ಆಸೀಸ್ ಇನ್ನಿಂಗ್ಸ್ ಪತನಕ್ಕೆ ಕಾರಣವಾಯಿತು.

ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ ಅನ್ನು ಬಹುಬೇಗನೇ  ಮುಗಿಸುವಲ್ಲಿ ಅಶ್ವಿನ್ ಮತ್ತು ಜಡೇಜಾ ಪ್ರಮುಖ ಪಾತ್ರ ವಹಿಸಿದರು. ಇವರಿಬ್ಬರು ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾದ ಸಂಪೂರ್ಣ 10 ವಿಕೆಟ್‌ಗಳನ್ನು ಕಬಳಿಸಿದರು. ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದರೆ, ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿ 7  ವಿಕೆಟ್ ಕಬಳಿಸಿದರು.

ಭಾರತದ ಸ್ಪಿನ್ ದಾಳಿಗೆ ನಲುಗಿ ಆಸ್ಟ್ರೇಲಿಯಾ ನೀಡಿದ 115 ರನ್‌ಗಳ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ಸುಲಭವಾಗಿ ಸಾಧಿಸಿತು. ಇದರಲ್ಲಿ 100ನೇ ಟೆಸ್ಟ್ ಆಡಿದ ಚೇತೇಶ್ವರ ಪೂಜಾರ ಕೊನೆಯವರೆಗೂ ಔಟಾಗದೆ ತಂಡಕ್ಕೆ ಗೆಲುವು ತಂದಿತ್ತರು.

ದೆಹಲಿಯಲ್ಲಿನ ಈ ದೊಡ್ಡ ಗೆಲುವಿನೊಂದಿಗೆ ಭಾರತ ಟೆಸ್ಟ್ ರ‍್ಯಾಂಕಿಂಗ್‌ನಲ್ಲೂ ನಂಬರ್ ಒನ್ ತಂಡವಾಗಿ ಹೊರಹೊಮ್ಮಿದೆ. ಅಲ್ಲದೆ ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಸೋಲುವ ಮೂಲಕ ಆಸೀಸ್ ತಂಡ ಟೆಸ್ಟ್ ರ್ಯಾಂಕಿಂಗ್​ನಲ್ಲಿ 2ನೇ ಸ್ಥಾನಕ್ಕೆ ಕುಸಿದಿದೆ. ಇದರೊಂದಿಗೆ ಭಾರತ ಈಗ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ ಒನ್ ತಂಡವಾಗಿ ಹೊರಹೊಮ್ಮಿದೆ. ಇದಲ್ಲದೆ, ದೆಹಲಿಯನ್ನು ಗೆಲ್ಲುವ ಮೂಲಕ, ಭಾರತ ತಂಡವು 2010 ರಿಂದ ತವರಿನಲ್ಲಿ 200 ಕ್ಕಿಂತ ಕಡಿಮೆ ರನ್‌ಗಳನ್ನು ಬೆನ್ನಟ್ಟಿದ ಸಂದರ್ಭದಲ್ಲಿ 100 ಪ್ರತಿಶತ ವಿಜಯದ ದಾಖಲೆಯನ್ನು ಉಳಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist