ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಡೇಜಾ ಸ್ಪಿನ್​ ಮೋಡಿ, ರಹಾನೆ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧ ಚೆನ್ನೈಗೆ 7 ವಿಕೆಟ್ ಗೆಲುವು!

Twitter
Facebook
LinkedIn
WhatsApp
ಜಡೇಜಾ ಸ್ಪಿನ್​ ಮೋಡಿ, ರಹಾನೆ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧ ಚೆನ್ನೈಗೆ 7 ವಿಕೆಟ್ ಗೆಲುವು!

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂ ನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. 

ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ರೋಹಿತ್ ಶರ್ಮಾ ಬಳಗ 8 ವಿಕೆಟ್ ನಷ್ಟಕ್ಕೆ 157 ರನ್ ಕಲೆ ಹಾಕಿತು. ರೋಹಿತ್ 21, ಇಶಾನ್ ಕಿಶನ್ 32 ರನ್ ಗಳಿಸಿ ಔಟಾದರು.

ಕ್ಯಾಮರೂನ್ ಗ್ರೀನ್12, ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸೂರ್ಯಕುಮಾರ್ 1 ರನ್ ಗೆ ಆಟ ಮುಗಿಸಿದರು. ತಿಲಕ್ ವರ್ಮಾ 22, ಟಿಮ್ ಡೇವಿಡ್ 31, ಹೃತಿಕ್ ಶೋಕಿನ್ ಔಟಾಗದೆ 18 ರನ್ ಗಳಿಸಿದರು. ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು. ತುಷಾರ್ ದೇಶಪಾಂಡೆ ಮತ್ತು ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು. ಸಿಸಂದ ಮಗಲಾ1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಚೆನ್ನೈ ಮೊದಲ ಓವರ್ ನಲ್ಲಿ ಶೂನ್ಯಕ್ಕೆ ಮೊದಲ ವಿಕೆಟ್ ಕಳೆದು ಕೊಂಡು ಆಘಾತ ಅನುಭವಿಸಿತು. ಆ ಬಳಿಕ ತಾಳ್ಮೆಯ ಆಟವಾಡಿದ ರುತುರಾಜ್ ಗಾಯಕ್ವಾಡ್ನಾಟ್ ಔಟಾಗದೆ 40 ರನ್ ಗಳಿಸಿದರು.

ಭರ್ಜರಿ ಆಟವಾಡಿದ ಅಜಿಂಕ್ಯ ರಹಾನೆ 27 ಎಸೆತಗಳಲ್ಲಿ 61 ರನ್ ಗಳಿಸಿ ಮಿಂಚಿದರು. ಶಿವಂ ದುಬೆ 28, ಅಂಬಟಿ ರಾಯುಡು ಔಟಾಗದೆ 20 ರನ್ ಗಳಿಸಿದರು.

ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆದ್ದಿದೆ. ಉದ್ಘಾಟನ ಪಂದ್ಯದಲ್ಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ಗೆ 5 ವಿಕೆಟ್‌ಗಳಿಂದ ಸೋತರೆ, ಲಕ್ನೋ ವಿರುದ್ಧ ತನ್ನದೇ ಅಂಗಳದಲ್ಲಿ 12 ರನ್ನುಗಳ ರೋಚಕ ಜಯ ಸಾಧಿಸಿತ್ತು. ಮುಂಬಯಿ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.ಬೆಂಗಳೂ ರಿನ ಮೊದಲ ಪಂದ್ಯದಲ್ಲಿ ಅದು ಆರ್‌ಸಿಬಿಗೆ 8 ವಿಕೆಟ್‌ಗಳಿಂದ ಶರಣಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ