ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಡೇಜಾ ಹಿಡಿದ ಕ್ಯಾಚ್​ಗೆ ದಂಗಾದ ಕಾಂಗರೂಗಳು! ವಿಡಿಯೋ ವೈರಲ್

Twitter
Facebook
LinkedIn
WhatsApp
ಜಡೇಜಾ

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ (India Vs Australia) ನಡುವಿನ ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯುತ್ತಿದೆ. ಬಹಳ ದಿನಗಳಿಂದ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿದ್ದ ಜಡೇಜಾ (Ravindra Jadeja), ಬಾರ್ಡರ್ ಗವಾಸ್ಕರ್ (Border Gavaskar Trophy) ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ಭರ್ಜರಿ ಕಂಬ್ಯಾಕ್ ಮಾಡಿದ್ದರು. ಇಡೀ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವುದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಜಂಟಿಯಾಗಿ ಬಾಚಿಕೊಂಡಿದ್ದರು. ಇದೀಗ ಏಕದಿನ ಸರಣಿಯಲ್ಲೂ ಕಮಾಲ್ ಮಾಡುತ್ತಿರುವ ಜಡೇಜಾ, ಅದ್ಭುತ ಫೀಲ್ಡಿಂಗ್ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಸ್ಮಿತ್ ವಿಕೆಟ್ ಬಳಿಕ ಬಂದು, ನಿದಾನವಾಗಿ ಇನ್ನಿಂಗ್ಸ್ ಕಟ್ಟುತ್ತಿದ್ದ ಲಬುಶೇನ್ (Marnus Labuschagne) ಅವರ ಕ್ಯಾಚನ್ನು ಅದ್ಭುತವಾಗಿ ಹಿಡಿಯುವುದರೊಂದಿಗೆ ಜಡೇಜಾ ತಮ್ಮ ಹಳೆಯ ಆಟವನ್ನು ಪ್ರದರ್ಶಿಸಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಆಸ್ಟ್ರೇಲಿಯಾವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸ್ಟ್ರೇಲಿಯಾಕ್ಕೆ ಮಿಚೆಲ್ ಮಾರ್ಷ್​ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ನೆರವಾದರು. ಮಿಚೆಲ್ ಮಾರ್ಷ್, ನಾಯಕ ಸ್ಟೀವನ್ ಸ್ಮಿತ್ ಜೊತೆ ಸೇರಿ ಎರಡನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ ನಡೆಸಿದರು. ಇವರಿಬ್ಬರು ಎರಡನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡಿತು. ಈ ಜೋಡಿ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಸ್ಮಿತ್​ರನ್ನು ಬಲಿ ಪಡೆಯುವುದರೊಂದಿಗೆ ಪಾಂಡ್ಯ ತಂಡಕ್ಕೆ ಎರಡನೇ ಯಶಸ್ಸು ತಂದುಕೊಟ್ಟರು.

ಸ್ಮಿತ್ ನಂತರ ಬಂದ ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್ ಅವರೊಂದಿಗೆ ಮೂರನೇ ವಿಕೆಟ್‌ಗೆ 52 ರನ್ ಜೊತೆಯಾಟ ನಡೆಸಿದರು. ಮಿಚೆಲ್ ಮಾರ್ಷ್ ಶತಕದ ಹಾದಿಯಲ್ಲಿದ್ದರು. ಆದರೆ ಮಿಚೆಲ್ ಜಡೇಜಾ ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್​ಗೆ ಕ್ಯಾಚಿತ್ತು ಔಟಾದರು. ಮಾರ್ಷ್ 65 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 81 ರನ್ ಗಳಿಸಿದರು. ಮಿಚೆಲ್ ಔಟಾಗುವುದರೊಂದಿಗೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತು.

ಮಾರ್ಷ್ ನಂತರ ಬಂದ ಜೋಶ್ ಇಂಗ್ಲಿಸ್, ಲಬುಶೇನ್ ಜೊತೆಗೂಡಿ ಆಸೀಸ್ ಇನ್ನಿಂಗ್ಸ್ ಉಳಿಸಲು ಪ್ರಯತ್ನಿಸುತ್ತಿದ್ದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 10 ರನ್ ಸೇರಿಸಿದರು. ಆದರೆ ಕುಲದೀಪ್ ಯಾದವ್ ಮಾಡಿದ ಪಂದ್ಯದ 23ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಲಬುಶೇನ್​, ಥರ್ಡ್ ಮ್ಯಾನ್ ಕಡೆಗೆ ಆಡಿದರು. ಆದರೆ ಅಲ್ಲೇ ನಿಂತಿದ್ದ ರವೀಂದ್ರ ಜಡೇಜಾ, ಚೆಂಡು ತನ್ನೆಡೆಗೆ ಬರುವುದನ್ನು ಗಮನಿಸಿ, ಗಾಳಿಯಲ್ಲಿ ಜಿಗಿದು ಸುಂದರವಾದ ಒನ್ ಹ್ಯಾಂಡ್ ಕ್ಯಾಚ್ ಪಡೆದರು. ಜಡೇಜಾ ಹಿಡಿದ ಲಬುಶೇನ್ ಕ್ಯಾಚ್ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ